ಮಧುಗಿರಿ
ಸ್ವಾತಂತ್ರ್ಯ ಭಾರತದಲ್ಲಿ ಸೈನಿಕರಷ್ಟೇ ಪಾತ್ರ ರೈತರು ಕೂಡ ವಹಿಸುತ್ತಾರೆ. ಅನ್ನ ಬೆಳೆಯುವ ಹಸಿರು ಸೇನಾನಿಗಳ ದಿನ, ಜಾತಿ ತಾರತಮ್ಯ, ಭ್ರಷ್ಟಾಚಾರ ಮುಕ್ತವಾದ ದಿನ ಎಂದು ಉಪವಿಭಾಗಾಧಿಕಾರಿ ಡಾ.ವೆಂಕಟೇಶಯ್ಯ ಅಭಿಪ್ರಾಯ ತಿಳಿಸಿದರು.
ಪಟ್ಟಣದ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ತಾಲ್ಲೂಕು ಆಡಳಿತ ಮತ್ತು ವಿವಿಧ ಇಲಾಖೆಗಳ ಸಹಯೋಗದಲ್ಲಿ ಏರ್ಪಡಿಸಿದ್ದ ಭಾರತದ 72ನೇ ಸ್ವಾತಂತ್ರ್ಯ ದಿನಾಚರಣೆಯ ಸಮಾರಂಭದಲ್ಲಿ ಧ್ವಜಾರೋಹಣ ಹಾಗೂ ಗೌರವ ವಂದನೆ ಸ್ವೀಕರಿಸಿ ಮಾತನಾಡಿದ ಅವರು, ಗ್ರಾಮಗಳು ಉತ್ಪಾದನಾ ಕೇಂದ್ರಗಳಾದ ಮತ್ತು ದ್ವೇಷ ಮುಕ್ತವಾದ ದಿನವೇ ನಮ್ಮ ಭಾರತಕ್ಕೆ ನಿಜವಾದ ಸ್ವಾತಂತ್ರ್ಯದ ದಿನ. ದಾಸ್ಯದಿಂದ ವಿಮೋಚನೆಯೇ ಸ್ವಾತಂತ್ರ್ಯ ಅದುವೆ ಆಗಸ್ಷ್ 15 ಆ ವಿಚಾರದಲ್ಲಿ ಅತ್ಯಂತ ಮಹತ್ತರವಾದ ದಿನ. ಈ ದಿನ ಕೇವಲ ಸಾಂಕೇತಿಕ ದಿನವಾಗಬಾರದು. ಈ ದಿನಕ್ಕಾಗಿ ನಮ್ಮ ದೇಶದ ಲಕ್ಷಾಂತರ ಜನರ ನಿರಂತರವಾಗಿ 300 ವರ್ಷಗಳ ತ್ಯಾಗ, ಬಲಿದಾನವಿದೆ ಎಂದರು.
ಶಾಸಕ ಎಂ.ವಿ.ವೀರಭದ್ರಯ್ಯ ಮಾತನಾಡಿ, ನಮ್ಮ ಇಂದಿನ ಮಕ್ಕಳನ್ನು ದೇಶದ ಸತ್ಪ್ರಜೆಗಳಾಗಿ ರೂಪುಗೊಳಿಸಿದಾಗ ನಮ್ಮ ಈ ಸ್ವಾತಂತ್ರ್ಯಕ್ಕೆ ನಿಜವಾದ ಅರ್ಥ ದೊರೆತಂತಾಗುತ್ತದೆ. ನಿಜವಾದ ಭಾರತೀಯ ದೇಶ ನಮಗೇನು ಮಾಡಿದೆ ಎಂಬುದಕ್ಕಿಂತ, ದೇಶಕ್ಕೆ ನಾನೇನು ಮಾಡಿದ್ದೇನೆ ಎಂಬುದನ್ನು ಅರಿತರೆ ಸೂಕ್ತ ಎಂದು ಅಭಿಪ್ರಾಯ ಪಟ್ಟರು.
ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು ಸಾಂಸ್ಕøತಿಕ ಕಾರ್ಯಕ್ರಮಗಳನ್ನು ನೆರವೇರಿಸಿದರು. ಇದೇ ಸಂದರ್ಭದಲ್ಲಿ ಮಾಜಿ ಸೈನಿಕರಿಗೆ ಮತ್ತು ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಜಿಲ್ಲಾ ಪಂಚಾಯಿತಿ ಸದಸ್ಯ ಜಿ.ಜೆ.ರಾಜಣ್ಣ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಇಂದಿರಾ ದೇನಾನಾಯಕ್, ಉಪಾಧ್ಯಕ್ಷ ಲಕ್ಷ್ಮೀನರಸಯ್ಯ, ಎ.ಪಿ.ಎಂ.ಸಿ ಅಧ್ಯಕ್ಷ ಪಿ.ಟಿ.ಗೋವಿಂದಪ್ಪ, ಪ್ರಭಾರ ತಹಸೀಲ್ದಾರ್ ಎ.ತಿಪ್ಪೇಸ್ವಾಮಿ, ಪುರಸಭೆಯ ಪ್ರಭಾರ ಮುಖ್ಯಾಧಿಕಾರಿ ಸೌಮ್ಯ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ರವಿಶಂಕರ್‍ರೆಡ್ಡಿ, ಕ್ಷೇತ್ರ ಶಿಕ್ಷಣಾಧಿಕಾರಿ ನರಸಿಂಹಯ್ಯ, ಕಸಾಪ ಅಧ್ಯಕ್ಷ ಚಿ.ಸೂ.ಕೃಷ್ಣಮೂರ್ತಿ, ಮುಖಂಡರಾದ ಎಂ.ಎಲ್.ಗಂಗರಾಜು, ಎಂ.ಆರ್.ಜಗನ್ನಾಥ್ ಸೇರಿದಂತೆ ಮತ್ತಿತ್ತರು ಉಪಸ್ಥಿತರಿದ್ದರು.