ಗುಬ್ಬಿ
ಭಾರತದ ಸ್ವತಂತ್ರ ಹೋರಾಟದ ಆದರ್ಶಗಳು ವಿಶ್ವಕ್ಕೆ ಮಾದರಿಯಾಗಿವೆ. ಸ್ವಾತಂತ್ರ್ಯ ಹೋರಾಟಗಾರರ ಆದರ್ಶಗಳನ್ನು ಪ್ರತಿಯೊಬ್ಬರು ಸಾಮಾಜಿಕ ಜೀವನದಲ್ಲಿ ಅಳವಡಿಸಿಕೊಳ್ಳುವುದರ ಜೊತೆಗೆ ವಿದ್ಯಾರ್ಥಿಗಳು ಉತ್ತಮ ಗುಣಮಟ್ಟದ ಶಿಕ್ಷಣ ಪಡೆಯುವ ಮೂಲಕ ಚಿಕ್ಕಂದಿನಲ್ಲಿಯೆ ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಂಡು ಸದೃಢ ಭಾರತವನ್ನು ನಿರ್ಮಾಣಮಾಡಬೇಕೆಂದು ತಹಸೀಲ್ದಾರ್ ಜಿ.ವಿ.ಮೋಹನ್ಕುಮಾರ್ ತಿಳಿಸಿದರು.
ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ಪಟ್ಟಣ ಪಂಚಾಯ್ತಿ ಮತ್ತು ತಾಲ್ಲೂಕು ಪಂಚಾಯ್ತಿಯ ಸಹಯೋಗದಲ್ಲಿ ಏರ್ಪಡಿಸಿದ್ದ 72 ನೇ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ತ್ಯಾಗ, ಬಲಿದಾನಗಳಿಂದ ದೊರೆತಿರುವ ಈ ಸ್ವಾತಂತ್ರ್ಯವನ್ನು ಉಳಿಸಿ ಬೆಳೆಸುವುದರ ಜೊತೆಗೆ ಮಂದಿನ ತಲೆಮಾರಿಗೆ ತಲುಪಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ತಿಳಿಸಿದರು.
ಪ್ರಾಧ್ಯಾಪಕಿ ಪ್ರೊ: ರಮ್ಯ ಮಾತನಾಡಿ ದೇಶಕ್ಕೆ ಸ್ವತಂತ್ರ ಪಡೆಯಲು ಸಾಕಷ್ಟು ದೊಡ್ಡ ಮಟ್ಟದ ಹೋರಾಟಗಳು ನಡೆದಿವೆ. ಅಸಹಕಾರ ಚಳುವಳಿ, ಕ್ವಿಟ್ ಇಂಡಿಯಾ, ಉಪ್ಪಿನ ಸತ್ಯಾಗ್ರಹದಂತಹ ಸಾಕಷ್ಟು ಹೋರಾಟಗಳ ತರುವಾಯ ನಮಗೆ ಸ್ವತಂತ್ರ ಬಂದಿದ್ದು. ಇಂದಿನ ಯುವಶಕ್ತಿ ಅದರ ಬಗ್ಗೆ ತಿಳಿದುಕೊಳ್ಳಬೇಕಾಗಿದೆ ಹಾಗೂ ಇಲ್ಲಿನ ವ್ಯವಸ್ಥೆಯನ್ನು ಗೌರವಿಸಬೇಕಾಗಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಿಗೆ ಸನ್ಮಾನ ಹಾಗೂ ತಾಲ್ಲೂಕಿನಲ್ಲಿ ಅತಿ ಹೆಚ್ಚು ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.
ಶ್ರೀಚನ್ನಬಸವೇಶ್ವರ ಯುವಕ ಸಂಘದ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಸಲಾಯಿತು. ಶ್ರೀ ಜೈಭುವನೇಶ್ವರಿ ಕನ್ನಡ ಅಭಿವೃದ್ಧಿ ಮತ್ತು ಸೇವಾ ಟ್ರಸ್ಟ್ ವತಿಯಿಂದ ಸರ್ಕಾರಿ ಶಾಲೆಗಳಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಪಟ್ಟಣದ ವಿವಿಧ ಶಾಲೆಗಳ ವಿದ್ಯಾರ್ಥಿಗಳಿಂದ ಆಕರ್ಷಕ ಮನರಂಜನಾ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯ್ತಿ ಸದಸ್ಯರಾದ ಕೆ.ಯಶೋಧಮ್ಮ, ಜಿ.ಹೆಚ್.ಜಗನ್ನಾಥ್, ಡಾ:ನವ್ಯ ಬಾಬು, ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಅನುಸೂಯ, ಉಪಾಧ್ಯಕ್ಷೆ ಜಿ.ಕಲ್ಪನ, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಶಾಂತಕುಮಾರ್, ಮುಖಂಡರುಗಳಾದ ಜಿ.ಡಿ.ಸುರೇಶ್ಗೌಡ, ಸಿ.ಮೋಹನ್, ಸಿ.ಆರ್.ಶಂಕರ್ ಕುಮಾರ್, ಹೆಚ್.ಡಿ.ಯಲ್ಲಪ್ಪ, ಹೆಚ್.ಆರ್.ಗುರುರೇಣುಕಾರಾಧ್ಯ, ಸಲೀಂಪಾಷಾ, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಆರ್.ಜಿ.ನಾಗಭೂಷಣ್, ರಾಜ್ಯ ಪರಿಷತ್ ಸದಸ್ಯ ಕೆ.ವಿ.ನಾರಾಯಣ್, ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶಪ್ಪ, ಸಿಪಿಐ ರಂಗಸ್ವಾಮಿ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಯೋಗಾನಂದ್, ಶಿಶು ಅಭಿವೃದ್ಧಿ ಅಧಿಕಾರಿ ಕೆ.ಆರ್.ಹೊನ್ನೇಶಪ್ಪ, ಎಇಇ ಹೆಚ್.ಆರ್.ರಮೇಶ್, ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ನಾಗೇಂದ್ರ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು.
ಪ್ರತಿದಿನದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿಯ facebook page like ಮಾಡಿ