ಹೂವಿನಹಡಗಲಿ :
ಅನೇಕ ಮಹಾನೀಯರ ತ್ಯಾಗ, ಬಲಿದಾನದಿಂದ ನಮಗೆ ಸ್ವಾತಂತ್ರ್ಯ ಸಿಕ್ಕಿದೆ ಎಂದು ಶಾಸಕ ಪಿ.ಟಿ.ಪರಮೇಶ್ವರನಾಯ್ಕ ಹೇಳಿದರು.
ಅವರು ತಾಲೂಕು ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ 72ನೇ ಸ್ವಾತಂತ್ರೋತ್ಸವದ ದಿನಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬಳ್ಳಾರಿ ಜಿಲ್ಲೆಯ ಹಲವಾರು ಜನರು ಕೂಡಾ ಅಂದಿನ ಸ್ವತಂತ್ರ ಹೋರಾಟದಲ್ಲಿ ಪಾಲ್ಗೊಂಡಿದ್ದರು ಎಂದು ಸ್ಮರಿಸಿದ ಅವರು, ದೇಶದ ಐಕ್ಯತೆ, ಅಭಿವೃದ್ದಿ ನಮ್ಮ ಗುರಿಯಾಗಿದೆ ಎಂದರು.
ಧ್ವಜಾರೋಹಣ ನೆರವೇರಿಸಿ ಮಾತನಾಡಿದ ತಹಶೀಲ್ದಾರ್ ಕೆ.ರಾಘವೇಂದ್ರರಾವ್ರವರು ನಮ್ಮ ದೇಶ 72ನೇ ಸ್ವಾತಂತ್ರೋತ್ಸವದ ಸಂಭ್ರಮಾಚರಣೆಯಲ್ಲಿದೆ ಹಲವಾರು ಸಾಧನೆಗಳನ್ನು ಗಳಿಸಿದ್ದರು ಕೂಡಾ ಇನ್ನೂ ಸಾಕಷ್ಟು ಸಾಧಿಸುವುದಿದೆ ಎಂದರು.
ನಮ್ಮೆಲ್ಲರ ಶಾಂತಿಗಾಗಿ ಗಡಿಯಲ್ಲಿ ಸೇವೆ ಸಲ್ಲಿಸುತ್ತಿರುವ ಸೈನಿಕರು, ಹಾಗೂ ದೇಶದ ಅನ್ನದಾತರು ಇಂದು ಆತಂಕದ ಸ್ಥಿತಿಯಲ್ಲಿದ್ದು, ಅವರಿಗೆ ಮಾನಸಿಕ ಸ್ಥರ್ಯವನ್ನು ತುಂಬುವಂತಹ ಕೆಲಸವನ್ನು ಮಾಡಬೇಕಾಗಿದೆ ಎಂದರು.
ಶಾಸಕ ಪಿ.ಟಿ.ಪರಮೇಶ್ವರನಾಯ್ಕರವರು ಹೂವಿನಹಡಗಲಿ ಕ್ಷೇತ್ರದ ಸರ್ವಾಂಗೀಣ ಅಭಿವೃದ್ದಿಗಾಗಿ ಶ್ರಮಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಶಿಕ್ಷಣದಲ್ಲಿ ನಾವು ಗುರಿ ತಲುಪಿದ್ದೇವೆ ಎನ್ನುವ ಹೆಮ್ಮೆ ಒಂದೆಡೆ ಇದ್ದರೆ, ಗುಣಮಟ್ಟದ ಶಿಕ್ಷಣದ ಅಗತ್ಯವೂ ಕೂಡಾ ಇದೆ ಎಂದರು.
ಮಾಜಿ ಶಾಸಕ ನಂದಿಹಳ್ಳಿ ಹಾಲಪ್ಪ ಮಾತನಾಡಿ ಒಂದೇ ಮಾತರಂ ಎನ್ನುವಂತೆ ನಾವೆಲ್ಲರೂ ಕೂಡಾ ಒಂದಾಗಿ ಬಾಳುವುದರ ಮೂಲಕ ದೇಶದ ಐಕ್ಯತೆಯನ್ನು ಕಾಪಾಡಬೇಕಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಹಲವಾರು ರಂಗಗಳಲ್ಲಿ ಸೇವೆ ಸಲ್ಲಿಸಿದ ಗಣ್ಯರನ್ನು ಸನ್ಮಾನಿಸಲಾಯಿತು.
ನಂತರದಲ್ಲಿ ನಡೆದ ವಿದ್ಯಾರ್ಥಿಗಳ ಸಾಂಸ್ಕøತಿಕ ಕಾರ್ಯಕ್ರಮಗಳು ಸ್ವಾತಂತ್ರೋತ್ಸವದ ದಿನಾಚರಣೆಗೆ ಕಳೆಗಟ್ಟಿದಂತಿತ್ತು.
ಸಂದರ್ಭದಲ್ಲಿ ತಾ.ಪಂ. ಅಧ್ಯಕ್ಷ ಎಸ್.ಹಾಲೇಶ್, ಜಿ.ಪಂ.ಸದಸ್ಯೆ ಎಂ.ವೀಣಾ ಪರಮೇಶ್ವರಪ್ಪ, ಪುರಸಭೆ ಅಧ್ಯಕ್ಷೆ ಶಕುಂತಲಮ್ಮ, ಉಪಾಧ್ಯಕ್ಷ ಎಸ್.ತಿಮ್ಮಣ್ಣ, ಡಿ.ವೈ.ಎಸ್.ಪಿ. ದಶರಥಮೂರ್ತಿ, ಬಿಇಓ ಬಸವರಾಜ್ ಶಿವಪುರ, ಪುರಸಭೆ ಮುಖ್ಯಾಧಿಕಾರಿ ಪ್ರೇಮ್ಚಾಲ್ರ್ಸ್, ಮುಖಂಡರಾದ ಅಟವಾಳಗಿ ಕೊಟ್ರೇಶ್, ಜ್ಯೋತಿ ಮಲ್ಲಣ್ಣ, ಸೇರಿದಂತೆ ಹಲವರು ಉಪಸ್ಥಿತರಿದ್ದರು. ಶಿಕ್ಷಕ ದ್ವಾರಕೀಶರೆಡ್ಡಿ ಕಾರ್ಯಕ್ರಮ ನಿರೂಪಿಸಿದರು.