ಬೆಂಗಳೂರು :
ಮಾನ್ಯ ಜಲ ಸಂಪನ್ಮೂಲ ಹಾಗೂ ಬಳ್ಳಾರಿ ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿಗಳಿಕೆ ಪ್ರಕರಣದ ತನಿಖೆಗೆ ಕರ್ನಾಟಕ ಹೈಕೋರ್ಟ್ ಹಸಿರು ನಿಶಾನೆ ತೋರಿದೆ . ಮಾನ್ಯ ನ್ಯಾಯಮೂರ್ತಿ ಬಿ.ವೀರಪ್ಪ ಅವರಿದ್ದ ಏಕಸದಸ್ಯ ಪೀಠವು ಗುರುವಾರ ತನಿಖೆಗೆ ಇದ್ದ ತಡೆಯಾಜ್ಞೆಯನ್ನು ರದ್ದು ಮಾಡಿ ಆದೇಶ ಹೋರಡಿಸಿದೆ. ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದೆಹಲಿಯಲ್ಲಿ ವಶಪಡಿಸಿಕೊಂಡ 8.60 ಕೋಟಿ ಲೆಕ್ಕ ಕೊಡದ ಹಣಕ್ಕೆ ಸಂಬಂಧಿಸಂತೆ ಸಚಿವರ ವಿರುದ್ಧ ತನಿಖೆ ನಡೆಯುತ್ತಿದೆ.ಮಾನ್ಯ ಸಚಿವರಾದ ಡಿ.ಕೆ.ಶಿವಕುಮಾರ್ ಅವರಿಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್ ಕೇಂದ್ರ ಸರ್ಕಾರದ ಪರವಾದ ಮಂಡನೆ ಮಾಡಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಪ್ರಭುಲಿಂಗ ನಾವದಗಿ ಅವರು, ‘ಅರ್ಜಿದಾರರು ವಾಸ್ತವಾಂಶ ಮುಚ್ಚಿಟ್ಟು ತಡೆ ಪಡೆದಿದ್ದಾರೆ. ಆದ್ದರಿಂದ, ಪ್ರಕರಣದ ತನಿಖೆಗೆ ಇರುವ ತಡೆಯಾಜ್ಞೆ ತೆರವು ಮಾಡಬೇಕು’ ಎಂದು ವಾದ ಮಂಡನೆ ಮಾಡಿದರು.ಇದರಿಂದಾಗಿ ಮಾನ್ಯ ಸಚಿವರಿಗೆ ಮತ್ತೆ ಕಂಟಕ ಎದುರಾಗಬಹುದು ಎನ್ನುವ ಲೆಕ್ಕಾಚಾರ ಶುರುವಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
