ದಾವಣಗೆರೆ:
ತಾಲ್ಲೂಕಿನ ಎಲೆಬೇತೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇವುಗಳ ಸಂಯುಕ್ತಾಶ್ರಯದಲ್ಲಿ ಶಾಲೆಯ ಆವರಣದಲ್ಲಿ ಪರಿಸರ ದಿನಾಚರಣೆ ಆಚರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಪರಿಸರಕ್ಕೆ ಸಂಬಂಧಿಸಿದ ರಸಪ್ರಶ್ನೆಗಳನ್ನು ಕೇಳುವ ಮೂಲಕ ಸರಿಯಾಗಿ ಉತ್ತರ ನೀಡಿದ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.
ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ಫಕ್ಕೀರಪ್ಪ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯತ್ ಸದಸ್ಯೆ ರೇಣುಕಾ ಕರಿಬಸಪ್ಪ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ಸಂಗನಗೌಡ್ರು, ಎಚ್.ಬಸವರಾಜಪ್ಪ, ಪತ್ರಕರ್ತ ಎಂ.ಷಡಾಕ್ಷರಪ್ಪ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಯೋಜನಾಧಿಕಾರಿ ಪದ್ಮಯ್ಯ, ಶುದ್ಧಗಂಗಾ ಯೋಜನಾಧಿಕಾರಿ ಧರ್ಮರಾಜ್, ಸೇವಾ ಪ್ರತಿನಿಧಿ ನೇತ್ರಾವತಿ, ವಿಜಯಲಕ್ಷ್ಮಿ, ರಮಾ ಉಪಸ್ಥಿತರಿದ್ದರು.
ಶಿಕ್ಷಕಿ ಸುಜಾತಾ ಸ್ವಾಗತಿಸಿದರು. ದೇವಮ್ಮ ನಿರೂಪಿಸಿದರು. ಶಾಲಾ ಮುಖ್ಯೋಪಾಧ್ಯಾಯ ಶಿವಮೂರ್ತಿ ವಂದಿಸಿದರು.
