ಕೇರಳ:
ನೀರಿನಲ್ಲಿ ಅಂಕಪಟ್ಟಿ ಕೊಚ್ಚಿ ಹೋಗಿದ್ದ ಕಾರಣ ವಿದ್ಯಾರ್ಥಿಯೋರ್ವ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೇರಳ ರಾಜ್ಯದ ಕೋಯಿಕ್ಕೋಡ್ ಜಿಲ್ಲೆಯಲ್ಲಿ ನಡೆದಿದೆ.
ಕೈಲಾಶ್ ಎಂಬುವವನೇ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯಾಗಿದ್ದಾನೆ. ಕೇರಳ ಜಿಲ್ಲೆಯಾದ್ಯಂತ ಮಹಾಮಳೆಯಿಂದಾಗಿ ಉಂಟಾದ ಪ್ರವಾಹದಲ್ಲಿ ಈತನ ಪಿಯುಸಿ ಅಂಕಪಟ್ಟಿಯು ಕೊಚ್ಚಿ ಹೋದ ಹಿನ್ನೆಲೆಯಲ್ಲಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.