ಬೆಂಗಳೂರು:
ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಿನ್ನೆ ತಡರಾತ್ರಿ ಬಾಂಬ್ ಬೆದರಿಕೆ ಕರೆ ಬಂದು ಆತಂಕ ಸೃಷ್ಠಿಯಾಗಿತ್ತು.
ವಿಮಾನ ನಿಲ್ದಾಣದ ಟರ್ಮಿನಲ್ ರೂಮ್‌ಗೆ ಕರೆ ಮಾಡಿದ್ದ ದುಷ್ಕರ್ಮಿಗಳು ಮಧ್ಯ ರಾತ್ರಿ 12 ಗಂಟೆಗೆ ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಫೋಟವಾಗುವುದಾಗಿ ಬೆದರಿಕೆ ಒಡ್ಡಿದ್ದರು.
ಇದರಿಂದ ಭಯಗೊಂಡ ಅಧಿಕಾರಿಗಳು ಕೂಡಲೇ ಏರ್‌ಪೋರ್ಟ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಲ್ಲದೇ, ಕರೆ ಬಂದ ಬಳಿಕ ಏರ್‌ಪೋರ್ಟ್‌ನಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಈ ಬಗ್ಗೆ ಪರಿಶೀಲನೆ ನಡೆಸಿದ ಪೊಲೀಸರಿಗೆ ಇದೊಂದು ಹುಸಿ ಕರೆ ಎಂದು ತಿಳಿದು ಬಂದಿದೆ. ಸದ್ಯ ಪೊಲೀಸರು ಫೋನ್ ನಂಬರ್ ಟವರ್ ಲೋಕೇಷನ್ ಪತ್ತೆ ಹಚ್ಚುವ ಕಾರ್ಯದಲ್ಲಿ ಮಗ್ನರಾಗಿದ್ದು, ಕಿಡಿಗೇಡಿಗಳಿಗೆ ಬಲೆ ಬೀಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ