ಬೆಂಗಳೂರು:

ಬಿಡಿಎ ಅಧ್ಯಕ್ಷರಾಗಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರನ್ನು ನೇಮಕ ಮಾಡಲಾಗಿದೆ. ನಾನು ಜಿಲ್ಲಾ ಉಸ್ತುವಾರಿ ಸಚಿವನಾಗಿರುವುದರಿಂದ ಅಧ್ಯಕ್ಷನಾಗಿದ್ದೇನೆ ಎಂದು ಅವರು ತಿಳಿಸಿದರು.
ಇಲ್ಲಿಯೂ ಪಾರದರ್ಶಕ ಆಡಳಿತವಿಲ್ಲ ಎಂಬ ದೂರು ಬರುತ್ತಿದೆ. ಹಿಂದೊಮ್ಮೆ ಬಿಡಿಎ ಮುಚ್ಚುವ ಚರ್ಚೆ ಕೂಡ ನಡೆದಿತ್ತು. ಹೀಗಾಗಿ ಬಿಡಿಎನನ್ನು ಆರೋಗ್ಯಕರ ದಾರಿಯಲ್ಲಿ ನಡೆಸಿಕೊಂಡು ಹೋಗುವಂತೆ ನಿರ್ದೇಶನ ನೀಡಿದರು. ಟೆಂಡರ್ದಾರರು ಕಾಮಗಾರಿ ಪೂರ್ಣಗೊಳಿಸುವಲ್ಲಿ ತಡ ಮಾಡಿದರೆ ಮುಲಾಜಿಲ್ಲದೇ ಟೆಂಡರ್ ರದ್ದುಪಡಿಸಿ ಬೇರೆಯವರಿಗೆ ನೀಡಿ.ಯಾವುದೇ ಕಾಮಗಾರಿಯಾದರೂ ಅವಧಿಯೊಳಗೆ ನಡೆಯಬೇಕು, ಅನಗತ್ಯ ವೆಚ್ಚಕ್ಕೆ ಅವಕಾಶ ನೀಡಬೇಡಿ ಎಂದು ಸೂಚನೆ ನೀಡಿದರು.
ಇದೇ ಸಂದರ್ಭದಲ್ಲಿ ಕೇಂದ್ರದ ವಿರುದ್ದ ಅಸಮಧಾನ ವ್ಯಕ್ತ ಪಡಿಸಿ, ಕೇಂದ್ರ ಸರ್ಕಾರವು ಮಳೆಯ ಆರ್ಭಟಕ್ಕೆ ನಲುಗಿದ ಕೊಡಗು ಜಿಲ್ಲೆಗೆ ಅತಿ ಕಡಿಮೆ ಹಣವನ್ನು ಬಿಡುಗಡೆ ಮಾಡಿದ್ದಾರೆ. ಆದರೆ, ಕೇರಳ ರಾಜ್ಯಕ್ಕೆ ಹೆಚ್ಚಿನ ಅನುದಾನ ನೀಡಿದ್ದಾರೆ ಇದರಿಂದ ತಾರತಮ್ಯ ಮಾಡಿರುವುದನ್ನು ವಿವರಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








