ಚಿಕ್ಕನಾಯಕನಹಳ್ಳಿ
ನಿವೃತ್ತ ಮುಖ್ಯಶಿಕ್ಷಕ ಬಿ.ಕೆ.ಕಾಡುಬಸವಯ್ಯ(81) ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ.
ದಿವಂಗತರು ತಾಲ್ಲೂಕು ದೇವಾಂಗ ಸಂಘದ ಮಾಜಿ ಅಧ್ಯಕ್ಷರು ಹಾಗೂ ಶ್ರೀ ಶನೇಶ್ವರ ದೇವಸ್ಥಾನ ಸಮಿತಿಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ. ಸೇವಾ ಅವಧಿಯಲ್ಲಿ ಇವರಿಗೆ ತಾಲ್ಲೂಕು ಉತ್ತಮ ಶಿಕ್ಷಕ ಪ್ರಶಸ್ತಿ ಸಂದಿದೆ. ಶ್ರೀಯುತರು ಹವ್ಯಾಸಿ ರಂಗಭೂಮಿ ಕಲಾವಿದರಾಗಿ ಸೇವೆ ಸಲ್ಲಿಸಿದ್ದಾರೆ.
ಇವರು ಇಬ್ಬರು ಪುತ್ರರು ಒಬ್ಬ ಪುತ್ರಿಯನ್ನು ಅಗಲಿದ್ದಾರೆ. ಸಂಜೆ 4 ಗಂಟೆಗೆ ದೇವಾಂಗ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ನಡೆಯಿತು. ಇವರ ನಿಧನಕ್ಕೆ ದೇವಾಂಗ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಸಂತಾಪ ಸೂಚಿಸಿದ್ದಾರೆ. ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.