ಬೆಂಗಳೂರು:

ದಿವಂಗತ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಅಸ್ಥಿ ಕಳಶವನ್ನು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಬುಧವಾರ ದೆಹಲಿಯಿಂದ ಬೆಂಗಳೂರಿಗೆ ತರಲಿದ್ದಾರೆ.
ಸಂಜೆ 5 ಗಂಟೆಗೆ ರಾಜ್ಯ ಬಿಜೆಪಿ ಕಾರ್ಯಾಲಯಕ್ಕೆ ಅಸ್ಥಿ ಕಲಶ ತಲುಪಲಿದ್ದು ಗಣ್ಯರಿಂದ ಅಟಲ್ ಜೀ ಅವರಿಗೆ ಗೌರವಾರ್ಪಣೆ ನಡೆಯಲಿದೆ.
ಅಸ್ಥಿ ಕಲಶದೊಂದಿಗೆ ಆಗಮಿಸಲಿರುವ ಯಡಿಯೂರಪ್ಪ ಅವರನ್ನು ಆರ್.ಅಶೋಕ್ ಸೇರಿದಂತೆ ಬಿಜೆಪಿ ಗಣ್ಯರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಳ್ಳುವರು.
ವಿಮಾನ ನಿಲ್ದಾಣ ರಸ್ತೆಯ ಟೋಲ್ ಗೇಟ್ ಬಳಿ ಸಾವಿರಾರು ಬಿಜೆಪಿ ಕಾರ್ಯಕರ್ತರು ಸಂಜೆ 4 ಗಂಟೆಗೆ ಅಸ್ಥಿ ಕಳಶವನ್ನು ಸ್ವಾಗತಿಸಲಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








