ಬೆಂಗಳೂರು
ಕಡೂರಿನ ಮಾಜಿ ಶಾಸಕರು ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯರಾದ ವೈ ಎಸ್ ವಿ ದತ್ತ ರವರ ಪತ್ನಿ ನಿರ್ಮಲಾ ಬೆಂಗಳೂರಿನ ಶಂಕರ್ ಕ್ಯಾನ್ಸರ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
60 ವರ್ಷದ ನಿರ್ಮಲಾ ಕಳೆದ ಹಲವು ದಿನಗಳಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ಬೆಂಗಳೂರಿನ ಶಂಕರ್ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಿನ್ನೆ ತಡರಾತ್ರಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಇವರ ಅಂತಿಮ ದರ್ಶನಕ್ಕಾಗಿ ವೈ.ಎಸ್.ವಿ ದತ್ತಾ ಅವರ ನಿವಾಸದಲ್ಲಿ ವ್ಯವಸ್ಥೆ ಮಾಡಲಾಗಿದೆ.
ಇಂದು (ಆ.23) ಸಂಜೆ 4 ಗಂಟೆಗೆ ಕಡೂರು ತಾಲ್ಲೂಕಿನ ಯಗಟಿ ಗ್ರಾಮದಲ್ಲಿ ದತ್ತ ಅವರ ತೋಟದಲ್ಲಿ ಅಂತ್ಯ ಸಂಸ್ಕಾರ ಮಾಡಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಇನ್ನೂ ಕಡೂರು ಮಾಜಿ ಶಾಸಕ ವೈ.ಎಸ್.ವಿ.ದತ್ತ ಅವರ ಪತ್ನಿ ನಿರ್ಮಲಾ ನಿಧನಕ್ಕೆ ಮಾಜಿ ಪ್ರಧಾನಿ , ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಶಂಕರ್ ಕ್ಯಾನ್ಸರ್ ಆಸ್ಪತ್ರೆಗೆ ತೆರೆಳಿ ಸಂತಾಪ ಸೂಚಿಸಿದ್ದಾರೆ. ಇತ್ತ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.