ಬಳ್ಳಾರಿ
ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ಜನವರಿ -2017 ರಿಂದ ಡಿಸೆಂಬರ್ 2017ರ ಅವಧಿಯಲ್ಲಿ ಕನ್ನಡದಲ್ಲಿ ಪ್ರಕಟವಾದ ಕೃತಿಗಳಿಗೆ, ಅವುಗಳ ಮುದ್ರಣ ಗುಣಮಟ್ಟವನ್ನು ಪರಿಗಣಿಸಿ ಮುದ್ರಕರಿಗೆ “ಕನ್ನಡ ಪುಸ್ತಕ ಮುದ್ರಣ ಸೊಗಸು-2017” ಬಹುಮಾನವನ್ನು ನೀಡಲಾಗುತ್ತಿದ್ದು, ಇದಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿಗಳು ತಿಳಿಸಿದ್ದಾರೆ.
ಆಸಕ್ತ ಮುದ್ರಕರು ಪುಸ್ತಕದ ಹೆಸರು, ಲೇಖಕರ ಹೆಸರು, ಪ್ರಕಟವಾದ ವರ್ಷ, ಮುದ್ರಕರ ಹೆಸರು ಹಾಗೂ ಇತರೆ ವಿವರಗಳೊಂದಿಗೆ ಪುಸ್ತಕದ ಎರಡು ಪ್ರತಿಗಳನ್ನು ಆ.27 ರೊಳಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು ಇವರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂ.ಸಂ.080-22484516/22107704 ಅಥವಾ ವೆಬ್ಸೈಟ್ www.anganwadirecruit.kar.nic.in ನ್ನು ವೀಕ್ಷಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.








