ಗುಬ್ಬಿ:
ಪಟ್ಟಣ ಸೇರಿದಂತೆ ತಾಲ್ಲೂಕಿನ ಹಲವು ದೇವಾಲಯಗಳು ಮತ್ತು ಮನೆಗಳಲ್ಲಿ ವರಮಹಾಲಕ್ಷ್ಮೀ ಹಬ್ಬದ ಅಂಗವಾಗಿ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ಧಾರ್ಮಿಕ ವಿಧಿ ವಿದಾನಗಳೊಂದಿಗೆ ನಡೆದವು. ಪೂಜಾ ವಸ್ತುಗಳಾದ ಹೂ, ಹಣ್ಣುಗಳ ಬೆಲೆ ಗಗನಕ್ಕೇರಿದ್ದರೂ ಸಹ ಸಂಪ್ರದಾಯದಂತೆ ವರಮಹಾಲಕ್ಷ್ಮೀ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಿದರು.
ಪಟ್ಟಣದ ಶ್ರೀ ಮಹಾಲಕ್ಷ್ಮೀ ಬಡಾವಣೆಯ ಮಹಾಲಕ್ಷ್ಮೀ ದೇವಾಲಯದಲ್ಲಿ ಬೆಳಗ್ಗೆಯಿಂದಲೆ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ವಿಧಿವತ್ತಾಗಿ ನಡೆದವು. ಅಮ್ಮನವರಿಗೆ ಅಭಿಷೇಕ ಸೇರಿದಂತೆ ವಿವಿಧ ಪೂಜಾ ಕಾರ್ಯಕ್ರಮಗಳ ಜೊತೆಗೆ ವಿವಿಧ ಹೊಗಳಿಂದ ವಿಶೇಷ ಅಲಂಕಾರ ಮಾಡಲಾಗಿತ್ತು ಪಟ್ಟಣದ ಮಹಿಳೆಯರು ಸರತಿಯ ಸಾಲಿನಲ್ಲಿ ನಿಂತು ತಮ್ಮ ಇಷ್ಟಾರ್ಥ ಪೂಜೆ ಸಲ್ಲಿಸಿದರು. ದೇವಾಲಯದ ಅಧ್ಯಕ್ಷ ನಾಗರಾಜು ಮಾತನಾಡಿ ಕಳೆದ 15 ವರ್ಷಗಳಿಂದಲೂ ನಿರತಂತರವಾಗಿ ಮಹಾಲಕ್ಷ್ಮಿ ಅಮ್ಮವರಿಗೆ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ವಿಧಿವತ್ತಾಗಿ ನಡೆಸುವುದರ ಜೊತೆಗೆ ಭಕ್ತಾಧಿಗಳಿಗೆ ಪ್ರಸಾದ ವಿತರಣೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
ತಾಲ್ಲೂಕಿನ ಕಡೇಪಾಳ್ಯ ಶ್ರೀಮಹಾಲಕ್ಷ್ಮೀ ದೇವಾಲಯದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ವಿಧಿವತ್ತಾಗಿ ನಡೆಸಲಾಯಿತು. ಬೆಳಗ್ಗೆಯಿಂದಲೆ ಗ್ರಾಮದ ಮಹಿಳೆಯರು ಸರತಿಯ ಸಾಲಿನಲ್ಲಿ ನಿಂತು ದೇವರ ಧರ್ಶನ ಪಡೆದರು. ಮಣ್ಣೆಮಾರಿ ಕಾವಲ್ ಶ್ರೀಮಣ್ಣಮ್ಮ ದೇವಿ ಅಮ್ಮನವರಿಗೆ ವರಮಹಾಲಕ್ಷ್ಮೀ ಹಬ್ಬದ ಅಂಗವಾಗಿ ವಿಶೇಷ ಅಲಂಕಾರ ಮಾಡಲಾಗಿತ್ತು ಬೆಳಗ್ಗೆಯಿಂದಲೆ ದೇವಾಲಯದಲ್ಲಿ ಭಕ್ತಾಧಿಗಳು ತಮ್ಮ ಇಷ್ಠಾರ್ಥ ಪೂಜೆ ಸಲ್ಲಿಸಿದರು.
ಪಟ್ಟಣದ ಡಿ.ಆರ್.ಕೀರ್ತಿರಾಜ್ ಅವರ ಮನೆಯಲ್ಲಿ ಪ್ರತಿ ವರ್ಷದಂತೆ ವರಮಹಾಲಕ್ಷ್ಮೀ ಪೂಜೆಯನ್ನು ವಿಶೇಷವಾಗಿ ಆಚರಿಸಿದರು. ವಿವಿಧ ಬಗೆಯ ತಿಂಡಿ ತಿನಿಸುಗಳನ್ನು ಹಬ್ಬಕ್ಕೆ ಮುನ್ನವೆ ತಯಾರಿಸಿಕೊಂಡು ಹಬ್ಬದಂದು ವರಮಹಾಲಕ್ಷ್ಮೀ ಅಮ್ಮನರಿಗೆ ವಿವಿಧ ಹೊಗಳಿಂದ ಅಲಂಕರಿಸಿ ಸುತ್ತ ಮುತ್ತಲ ಮಹಿಳೆಯರನ್ನು ಕರೆದು ಕುಂಕುಮ ನೀಡುವ ಮೂಲಕ ವಿನೂತನಾಗಿ ಆಚರಿಸಿದರು.