ಕೋಲಾರ:
ಒತ್ತುವರಿ ಮಾಡಿರುವ ಕೆರೆಯ ಜಾಗವನ್ನು ತೆರವುಗೊಳಿಸುವಂತೆ ರೈತ ಸಂಘಟನೆಗಳು ಕೃಷಿ ಸಚಿವ ಕೃಷ್ಣಬೈರೇಗೌಡ ಅವರನ್ನು ಮುತ್ತಿಗೆ ಹಾಕಿದ ಪ್ರಸಂಗ ಕೋಲಾರದಲ್ಲಿ ಇಂದು ನಡೆದಿದೆ.
ಅಧಿಕಾರಿಗಳ ಸಭೆ ನಡೆಸಲು ಜಿಲ್ಲಾ ಪಂಚಾಯಿತಿಗೆ ಆಗಮಿಸುತ್ತಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ಅವರನ್ನು ಈ ಸಂದರ್ಭದಲ್ಲಿ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.ನಂತರ ರೈತ ಸಂಘಟನೆಗಳು ಕೂಡಾ ತರಕಾರಗಳಿಗೆ ಬೆಂಬಲಬೆಲೆ ಮತ್ತು ವಿದ್ಯಾರ್ಥಿವೇತನ ಸಮಸ್ಯೆ ಹಾಗೂ ಕೆರೆ ಒತ್ತುವರಿ ಜಾಗವನ್ನು ತೆರವುಗೊಳಿಸುವಂತೆ ಆಗ್ರಹಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ತಮ್ಮ ಸಮಸ್ಯೆಗಳ ಬಗ್ಗೆ ಸವಿವರವಾಗಿ ಬರೆದ ಅರ್ಜಿಯನ್ನು ಜಿಲ್ಲಾಧಿಕಾರಿಗಳ ಕಚೇರಿಗೆ ಸಲ್ಲಿಸುವಂತೆ ತಿಳಿಸಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಕೇಂದ್ರ ಸರ್ಕಾರದಿಂದ ಕೊಡಗು ಸಂತ್ರಸ್ತರಿಗೆ ನಯಾಪೈಸೆ ಬಂದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದರು. ಕೇಂದ್ರದಿಂದ ನಮಗೆ ಪೂರಕ ಸ್ಪಂದನೆ ದೊರೆಯದಿದ್ದಾಗ ನಮ್ಮ ಸರ್ಕಾರದಿಂದ ಅಗತ್ಯ ಕಾರ್ಯಕ್ರಮಗಳನ್ನು ಕೈಗೊಂಡಿಲ್ಲ. ಎಂದು ದೂರಿದರು.ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು 2 ಕೋಟಿ ರೂ.ಗಳ ನೆರವು ನೀಡುವಂತೆ ಮನವಿ ಸಲ್ಲಿಸಲಾಗುವುದು ಎಂದು ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ