ಬೆಳಗಾವಿ:

ಕುರ್ಚಿಗಾಗಿ ಕಾಂಗ್ರೆಸ್ ನಾಯಕರು ಕೆಪಿಸಿಸಿ ಅಧ್ಯಕ್ಷರ ಸಮ್ಮುಖದಲ್ಲೇ ಕಿತ್ತಾಡಿದ ಪ್ರಸಂಗ ಇಂದು ಬೆಳಗಾವಿಯಲ್ಲಿ ನಡೆದಿದೆ.
ಬೆಳಗಾವಿಯಲ್ಲಿ ಸುದ್ದಿಗೋಷ್ಟಿ ನಡೆಸಲು ಬಂದಿದ್ದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ರವರ ಪಕ್ಕದಲ್ಲಿ ಕುಳಿತಿದ್ದ ಜಿಲ್ಲಾ ಉಸ್ತುವಾರಿ ಸಚಿವ ಮೋಹನ್ ಅವರನ್ನು ಕುರ್ಚಿ ಬಿಟ್ಟು ಎದ್ದು ಬರುವಂತೆ ಮಾಜಿ ಶಾಸಕ ಫಿರೋಜ್ಸೇಠ್ ಅವರು ಆಕ್ರೋಶ ವ್ಯಕ್ತ ಪಡಿಸಿ, ಕಾಂಗ್ರೆಸ್ ನಗರಘಟಕದ ಅಧ್ಯಕ್ಷ ರಾಜಾಸೇಠ್ಗೆ ಬಿಟ್ಟುಕೊಡುವಂತೆ ಆವಾಜ್ ಹಾಕಿದ್ದಾರೆ. ಇದಕ್ಕೆ ಹೆದರಿದ ಜಿಲ್ಲಾ ಉಸ್ತುವಾರಿ ಸಚಿವರು ತಾವು ಕುಳಿತ್ತಿದ್ದ ಜಾಗವನ್ನು ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ರಾಜಾ ಸೇಠ್ಗೆ ಬಿಟ್ಟು ಬೇರೆಯೆಡೆ ಕುಳಿತರು. ನಾಯಕರ ಅಸಮಾಧಾನ ಕಂಡ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮಧ್ಯೆ ಪ್ರವೇಶಿಸಿ ಪರಿಸ್ಥಿತಿ ಶಾಂತಗೊಳಿಸಿದರು.
ಅಭಿವೃದ್ಧಿ ಮಾಡಿಲ್ಲ ಎಂದು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ತಿರಸ್ಕರಿಸಿಲ್ಲ. ಆದರೆ, ಬೇರೆ, ಬೇರೆ ಕಾರಣಗಳಿಂದ ನಮ್ಮ ಪಕ್ಷವನ್ನು ತಿರಸ್ಕರಿಸಿದ್ದಾರೆ. ಪ್ರಸಕ್ತ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಎಲ್ಲಾ ಕಡೆ ತಮ್ಮ ಪಕ್ಷದ ಅಭ್ಯರ್ಥಿಗಳನ್ನು ಹಾಕಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಿಳಿಸಿದರು.
ಕೇಂದ್ರದ ಬಿಜೆಪಿ ಸರ್ಕಾರವು ದೇಶದ ಅಭಿವೃದ್ದಿಗೆ ಯಾವುದೇ ರೀತಿಯಲ್ಲಿ ನ್ಯಾಯಕೊಡಿಸುವಲ್ಲಿ ವಿಫಲವಾಗಿದೆ.ಈಗ ಅಧಿಕಾರಕ್ಕಾಗಿ ಹೋರಾಟ ಮಾಡುತ್ತಿದೆ ಎಂದು ಟೀಕಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








