ಮೈಸೂರು:
ಖಾಸಗಿ ಹಣಕಾಸು ಲೇವಾದೇವಿದಾರರಿಂದ ರೈತರ ಶೋಷಣೆ ತಪ್ಪಿಸಲು ಮೈತ್ರಿ ಸರ್ಕಾರ ಕಾನೂನು ಜಾರಿಗೆ ಮುಂದಾಗಿದೆ ಎಂದು ಸಮನ್ವಯ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಮಾನ್ಯ ಕನಿಷ್ಠ ಕಾರ್ಯಕ್ರಮ ಆಧಾರದ ಮೇಲೆ ಸರ್ಕಾರ ತೀರ್ಮಾನ ತೆಗೆದುಕೊಂಡಿದೆ ಎಂದರು. ಕೊಡಗಿನಲ್ಲಿ ಮಳೆಯಿಂದ ಭಾರೀ ಅನಾಹುತ ಆಗಿದೆ. ಕೇಂದ್ರ ಸರ್ಕಾರ ಕೂಡಲೇ ಒಂದು ಸಾವಿರ ಕೋಟಿ ರೂಪಾಯಿ ನೆರವು ನೀಡಬೇಕು ಎಂದು ಅವರು ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








