ಬೆಂಗಳೂರು:
ಉದ್ಯಮಿ ಲೋಕನಾಥ್ ಪುತ್ರ ವಿದ್ವತ್ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಶಾಸಕ ಎನ್.ಎ.ಹ್ಯಾರಿಸ್ ಪುತ್ರ ಮೊಹಮದ್ ನಲಪಾಡ್ ಬ್ರಿಟನ್ಗೆ ತೆರಳಲು ಅನುಮತಿ ಕೋರಿರುವ ಅರ್ಜಿಯನ್ನು ಅಧೀನ ನ್ಯಾಯಾಲದಲ್ಲಿಯೇ ಸಲ್ಲಿಸಿ ಪರಿಹಾರ ಪಡೆಯಲು ಹೈಕೋರ್ಟ್ ಸೂಚಿಸಿದೆ.
ಬ್ರಿಟನ್ ಪ್ರಯಾಣ : ಅನುಮತಿಗಾಗಿ ಹೈಕೋರ್ಟ್ ಮೆಟ್ಟಿಲೇರಿದ ನಲಪಾಡ್
‘ವಿದೇಶ ಪ್ರವಾಸಕ್ಕೆ ತೆರಳಲು ಅನುವಾಗುವಂತೆ ನನ್ನ ಜಾಮೀನು ಷರತ್ತುಗಳನ್ನು ಸಡಿಲಿಸಿ’ ಎಂದು ನಲಪಾಡ್ ಸಲ್ಲಿಸಿದ್ದ ಅರ್ಜಿಯನ್ನು “ಅಧೀನ ನ್ಯಾಯಾಲಯದಲ್ಲಿಯೇ ಸಲ್ಲಿಸಿ ಪರಿಹಾರ ಪಡೆಯಿರಿ” ಎಂದ ನ್ಯಾಯಪೀಠ, ಅರ್ಜಿ ವಿಲೇವಾರಿ ಮಾಡಿದೆ.
ನಲಪಾಡ್ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹ ಅವರಿದ್ದ ಏಕಸದಸ್ಯ ನ್ಯಾಯಪೀಠ ಇಂದು(ಸೋಮವಾರ) ವಿಚಾರಣೆ ನಡೆಸಿತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ