ಹಾಸನ: 
ಹಾಸನದ ಅರಕಲಗೂಡಿನ ದೊಡ್ಡನಾಯಕನಹಳ್ಳಿಯಲ್ಲಿ ಒಂದೇ ಕುಟುಂಬದ ಮೂವರು ವಿಷ ಸೇವಿಸಿ ದಾರುಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ.ಗ್ರಾಮದ ಕೃಷ್ಣ(50), ಪತ್ನಿ ಮಂಜುಳಾ(40) ಮತ್ತು ಪುತ್ರಿ ಭೂಮಿಕಾ(21) ಮೃತ ದುರ್ದೈವಿಗಳೆಂದು ತಿಳಿದುಬಂದಿದೆ.ಅವರು ಆತ್ಮಹತ್ಯೆಗೂ ಮುನ್ನ ಕುಟುಂಬ ಡೆತ್ ನೋಟ್ ಬರೆದಿಟ್ಟಿದ್ದು, ಅದರಲ್ಲಿ ಮೂವರು ಸದಸ್ಯರು ಮನನೊಂದು ಆತ್ಮಹತ್ಯೆಗೆ ಶರಣಾಗಿರುವುದಾಗಿ ಹೇಳಿಕೊಂಡಿದ್ದಾರೆ.
ಕೃಷಿಕರಾಗಿದ್ದ ಕೃಷ್ಣ, ತಮ್ಮ ಪುತ್ರಿಯ ಬಗ್ಗೆ ಅಪಪ್ರಚಾರ ಕುರಿತು ಬೇಸರದಿಂದ ಇದ್ದರು ಎನ್ನಲಾಗುತ್ತಿದೆ. ಕೆಲವು ದಿನಗಳ ಹಿಂದೆ ಕೃಷ್ಣರ ಮಗನನ್ನು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಇದರಿಂದ ಅವಮಾನಿತರಾದ ಕುಟುಂಬಸ್ಥರು ವಿಷ ಸೇವಿಸಿದ್ದಾರೆ ಎಂಬ ಮಾತುಗಳು ಕೂಡ ಕೇಳಿ ಬರುತ್ತಿವೆ.
ಆತ್ಮಹತ್ಯೆಯ ಕಾರಣ ಕುರಿತು ಪೊಲೀಸರು ತನಿಖೆಗೆ ಮುಂದಾಗಿದ್ದಾರೆ. ಅರಕಲಗೂಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








