ಸಿದ್ದರಾಮಯ್ಯ ಅವರು ಮತ್ತೆ ಮುಖ್ಯಮಂತ್ರಿ ಆಗುವುದರಲ್ಲಿ ತಪ್ಪೇನು? ಮಾಜಿ ಸಚಿವ ಎ. ಮಂಜು

ಹಾಸನ:

ಜೆಡಿಎಸ್ – ಕಾಂಗ್ರೆಸ್ ಮೈತ್ರಿ ಸರ್ಕಾರ ಪತನವಾದರೆ ಅದಕ್ಕೆ ಬೇರಾರೂ ಕಾರಣವಾಗುವುದಿಲ್ಲ. ನಿಮ್ಮ ಅಣ್ಣ ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ಅವರೇ ಇದಕ್ಕೆ ಕಾರಣರಾಗುತ್ತಾರೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ಎ. ಮಂಜು ಹೇಳಿದ್ದಾರೆ.

ಸಕಲೇಶಪುರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಸರ್ಕಾರ ಪತನಕ್ಕೆ ನಾವು ಜವಾಬ್ದಾರರಲ್ಲ. ಜವಾಬ್ದಾರಿ ಹೊರುವುದಿದ್ದರೆ ರೇವಣ್ಣ ಅವರೇ ಹೊರಬೇಕಾಗುತ್ತದೆ. ಈ ಬಗ್ಗೆ ಎಚ್ಚರಿಕೆಯಿಂದಿರುವಂತೆ ಕಿವಿ ಮಾತು ಹೇಳಿದ್ದಾರೆ.

ಸಮ್ಮಿಶ್ರ ಸರ್ಕಾರ ಆಡಳಿತದಲ್ಲಿ ಹಾಸನ ಜಿಲ್ಲೆಯಲ್ಲಿ ದ್ವೇಷದ ರಾಜಕಾರಣ ಶುರುವಾಗಿದೆ. ನಾವು ಇನ್ನೂ ದ್ವೇಷದ ರಾಜಕಾರಣ ಸಹಿಸಲು ಸಾಧ್ಯವಿಲ್ಲ. ನಿಮ್ಮ ಅಣ್ಣನಿಗೆ ಮುಖ್ಯಮಂತ್ರಿಗಳೇ ನೀವು ಬುದ್ದಿ ಹೇಳಿ. ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್ ಬಲಹೀನವಾಗುತ್ತಿದೆ. ಕಾಂಗ್ರೆಸ್ ವಿರುದ್ಧ ಜೆಡಿಎಸ್ ದ್ವೇಷ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದರು.

ಇದೆ ವೇಳೆ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಅಥವಾ ಹಾಸನ ಕ್ಷೇತ್ರವನ್ನು ಬಿಟ್ಟುಕೊಡಬೇಕು. ಎರಡೂ ಕ್ಷೇತ್ರದಲ್ಲಿ ಒಂದು ಕಾಂಗ್ರೆಸ್ ಪಾಲಾಗಬೇಕು. ಇಲ್ಲಾವಾದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಗತಿಯೇನು? ಎಂದು ತಮ್ಮಲ್ಲಿನ ಅಸಮಾಧಾನವನ್ನು ಹೊರಹಾಕಿದರು.

ಸಿದ್ದರಾಮಯ್ಯ ಅವರು ಮತ್ತೆ ಮುಖ್ಯಮಂತ್ರಿ ಆಗುವುದರಲ್ಲಿ ತಪ್ಪೇನು? ಎಂದು ಸಹ ಮಂಜು ಪ್ರಶ್ನಿಸಿದರು.

          ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link