ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠಾವಂತರಿಗೆ ಯಾವುದೇ ಬೆಲೆ ಇಲ್ಲ : ಜೆಡಿಎಸ್ ಸೇರ್ಪಡೆಯಾದ ಭಾಗ್ಯಮ್ಮ ಅನಿಸಿಕೆ

ಚಳ್ಳಕೆರೆ

            ಕಳೆದ ಹಲವಾರು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಮಹಿಳಾ ಘಟಕದಲ್ಲಿ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ ಜಿಲ್ಲಾ ಮಹಿಳಾ ಘಟಕ ಉಪಾಧ್ಯಕ್ಷೆ ಹಾಗೂ ಸಾಮಾಜಿಕ ಜಾ¯ತಾಣದ ಜಿಲ್ಲಾ ಘಟಕದ ಸಂಚಾಲಕಿಯಾಗಿ ಕಾರ್ಯನಿರ್ವಹಿಸಿದ ಬಿ.ಎಂ.ಭಾಗ್ಯಮ್ಮ ಕಾಂಗ್ರೆಸ್ ಪಕ್ಷವನ್ನು ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

            ಜೆಡಿಎಸ್ ಪಕ್ಷದ ಹಿರಿಯ ಯುವ ಮುಖಂಡ ಕೆ.ಸಿ.ವೀರೇಂದ್ರ(ಪಪ್ಪಿ), ಯುವ ಮುಖಂಡ ಎಂ.ರವೀಶ್‍ಕುಮಾರ್, ತಾಲ್ಲೂಕು ಅಧ್ಯಕ್ಷ ಪಿ.ತಿಪ್ಪೇಸ್ವಾಮಿ ನೇತೃತ್ವದಲ್ಲಿ ಅವರು ಜೆಡಿಎಸ್‍ಗೆ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಮತ್ತೊಬ್ಬ ಪ್ರಭಾವಿ ನಾಯಕಿ ಭಾಗ್ಯಲಕ್ಷ್ಮಿ ಸಹ ಜೆಡಿಎಸ್‍ಗೆ ಸೇರ್ಪಡೆಯಾದರು.

            ಈ ಸಂದರ್ಭದಲ್ಲಿ ಮಾತನಾಡಿದ ಕೆ.ಸಿ.ವೀರೇಂದ್ರ, ವಿಧಾನಸಭಾ ಚುನಾವಣೆ ನಂತರ ಜೆಡಿಎಸ್ ಪಕ್ಷಕ್ಕೆ ಹೆಚ್ಚು ಒಲವು ವ್ಯಕ್ತವಾಗುತ್ತಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದಿಂದ ವಿವಿಧ ಹುದ್ದೆಯ ಕಾರ್ಯಕರ್ತರು ಹಾಗೂ ಮುಖಂಡರು ಜೆಡಿಎಸ್‍ಗೆ ಸೇರ್ಪಡೆಯಾಗುತ್ತಿದ್ದಾರೆ. ಎಲ್ಲರನ್ನೂ ಗೌರವಿದಿಂದ ಪಕ್ಷ ಸ್ವಾಗತಿಸುತ್ತದೆ ಎಂದರು.

             ಬಿ.ಎಂ.ಭಾಗ್ಯಮ್ಮ ಮಾತನಾಡಿ, ನಾನು ಹಲವಾರು ವರ್ಷಗಳ ಕಾಲ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಪಕ್ಷದಲ್ಲಿ ಕಾರ್ಯಕರ್ತರ ಭಾವನೆಗಳಿಗೆ ಗೌರವವಿಲ್ಲವಾಗಿದೆ. ಯಾವುದೇ ಸಂದರ್ಭದಲ್ಲೂ ಸಹ ಪಕ್ಷದ ಮುಖಂಡರು ಕಾರ್ಯಕತರ್ಯರ ಅಭಿಪ್ರಾಯಗಳಿಗೆ ಮನ್ನಣೆ ನೀಡುವುದಿಲ್ಲ. ಪಕ್ಷದ ಇತ್ತೀಚಿನ ನಡವಳಿಕೆಯಿಂದ ಬೇಸತ್ತು ಕಾಂಗ್ರೆಸ್‍ಗೆ ರಾಜಿನಾಮೆ ನೀಡಿ ಜೆಡಿಎಸ್ ಸೇರ್ಪಡೆಯಾಗಿದ್ದೇನೆಂದರು.

              ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಪಿ.ತಿಪ್ಪೇಸ್ವಾಮಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಕಾರ್ಯಕರ್ತರಲ್ಲಿ ಹೆಚ್ಚಿನ ಪ್ರಮಾಣದ ಅಸಮದಾನಗಳು ಸ್ಪೋಟಗೊಳ್ಳುತ್ತಿವೆ. ಶಾಸಕರೂ ಸೇರಿದಂತೆ ಯಾವುದೇ ಮುಖಂಡರು ಕಾರ್ಯಕರ್ತರ ಭಾವನೆಗಳನ್ನು ಗೌರವಿಸುತ್ತಿಲ್ಲವೆಂಬ ಕೂಗು ಬಲವಾಗಿದೆ. ಹಲವಾರು ಮುಖಂಡರು ಹಾಗೂ ಕಾರ್ಯಕರ್ತರು ಜೆಡಿಎಸ್ ಸಂಪರ್ಕದಲ್ಲಿದ್ದು ಮುಂದಿನ ದಿನಗಳಲ್ಲಿ ಮತ್ತಷ್ಟು ಮುಖಂಡರು ಜೆಡಿಎಸ್ ಸೇರ್ಪಡೆಯಾಗಲಿದ್ದಾರೆಂದರು.ಈ ಸಂದರ್ಭದಲ್ಲಿ ಅಭ್ಯರ್ಥಿ ಪ್ರಶಾಂತ್‍ಕುಮಾರ್, ಭೀಮಣ್ಣ ಮುಂತಾದವರು ಉಪಸ್ಥಿತರಿದ್ದರು

          ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap