ಬೆಂಗಳೂರು:
ಟೊಯೋಟಾ ಕಿರ್ಲೋಸ್ಕರ್ ಸಂಸ್ಥೆಯಲ್ಲಿ ಸ್ಥಳೀಯರಿಗೆ ಉದ್ಯೋಗ ಒದಗಿಸುವಂತೆ ಮುಖ್ಯಮಂತ್ರಿ ಹೆಚ್. ಡಿ.ಕುಮಾರಸ್ವಾಮಿ ಇಂದಿಲ್ಲಿ ಸೂಚಿಸಿದ್ದಾರೆ.
ಟೊಯೋಟ ಕಿರ್ಲೋಸ್ಕರ್ ಮೋಟಾರ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಅಕಿಟೋ ತಚಿಬಾನ ಹಾಗೂ ನಿರ್ದೇಶಕ ಮತ್ತು ಉಪಾಧ್ಯಕ್ಷ ಶೇಖರ್ ವಿಶ್ವನಾಥನ್ ತಮ್ಮನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಅವರು ಈ ಮಾತನ್ನು ಹೇಳಿದರು.
ವಾಹನಗಳ ಮೇಲಿನ ತೆರಿಗೆ ವೆಚ್ಚ ಶೇ. 43 ರಷ್ಟು ಹೆಚ್ಚಿಸಲಾಗಿದ್ದು, ಜಿ ಎಸ್ ಟಿ ಕಡಿಮೆ ಮಾಡಿಸುವಂತೆ ಸಂಸ್ಥೆಯ ನಿರ್ದೇಶಕರು ಮನವಿ ಮಾಡಿದರು.ಈ ಬಗ್ಗೆ ಮನವಿಯನ್ನು ಸಲ್ಲಿಸಿದಲ್ಲಿ ಕೇಂದ್ರ ಸರ್ಕಾರದೊಂದಿಗೆ ಚರ್ಚಿಸುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








