ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಶಾಸಕರ ವಿರುದ್ಧ ಎಫ್ಐಆರ್

ಹಾಸನ: 

              ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆ, ಬಿಜೆಪಿ ಶಾಸಕ ಪ್ರೀತಮ್ ಗೌಡ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ತಡರಾತ್ರಿ ಠಾಣೆಗೆ ನುಗ್ಗಿದ ಶಾಸಕ ಪ್ರೀತಮ್ ಗೌಡ ಪೊಲೀಸರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆಂಬ ಆರೋಪದ ಮೇಲೆ ಪ್ರೀತಮ್ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

               ನಗರಸಭೆ ಚುನಾವಣೆ ಹಿನ್ನೆಲೆ ಮದ್ಯ ಹಂಚುತ್ತಿದ್ದ ಬಿಜೆಪಿ ಕಾರ್ಯಕರ್ತ ವೇಣು ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದರು. ಬಂಧಿಸಿದ್ದ ಆರೋಪಿಗಳನ್ನು ಪೊಲೀಸ್ ಠಾಣೆಗೆ ನುಗ್ಗಿ ಹೊರ ಕರೆತಂದಿದ್ದಾರೆ ಅನ್ನೋ ಆರೋಪದಡಿ, ಹಾಸನ  ಠಾಣೆಯಲ್ಲಿ ಪ್ರೀತಮ್ ವಿರುದ್ಧ ಪ್ರಕರಣ ದಾಖಲಾಗಿದೆ.ಶಾಸಕರ ವಿರುದ್ದ ಐಪಿಸಿ ಸಕ್ಷನ್ 143, 353, 225ರ ಅಡಿ ಪ್ರಕರಣ ದಾಖಲಾಗಿದೆ. ಎಂದು ಪೊಲೀಸರು ತಿಳಿಸಿದ್ದಾರೆ.

Recent Articles

spot_img

Related Stories

Share via
Copy link