ಇಂದು ವಕೀಲರ ಭವನದ ಶಂಕುಸ್ಥಾಪನೆ : ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ಭಾಗಿ

ಚಳ್ಳಕೆರೆ

             ಕಳೆದ ಹಲವಾರು ವರ್ಷಗಳಿಂದ ಚಳ್ಳಕೆರೆ ನಗರದಲ್ಲಿ ನ್ಯಾಯಾಲಯ ತನ್ನ ಕಾರ್ಯವನ್ನು ಯಶಸ್ಸಿಯಾಗಿ ನಡೆಸುತ್ತಿದ್ದು, ಸುಮಾರು 400ಕ್ಕೂ ಹೆಚ್ಚು ವಕೀಲರು ತಮ್ಮ ವೃತ್ತಿಯನ್ನು ನಡೆಸುತ್ತಿದ್ದು, ನ್ಯಾಯಾಂಗ ಇಲಾಖೆ ವಕೀಲರಿಗಾಗಿ ಅಂದಾಜು 1.5 ಕೋಟಿ ವೆಚ್ಚದಲ್ಲಿ ನೂತನ ವಕೀಲರ ಭವನನ್ನು ನಿರ್ಮಿಸಲಿದ್ದು, ವಕೀಲರ ಭವನದ ಶಂಕುಸ್ಥಾಪನೆಯನ್ನು ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಜಾನ್ ಮೈಕಲ್ ಕುನ್ಹಾ ನೆರವೇರಿಸುವರು ಎಂದು ಹಿರಿಯ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶ ದೇವೇಂದ್ರ ಪಂಡಿತ್ ತಿಳಿಸಿದ್ದಾರೆ.
              ಅವರು, ಶುಕ್ರವಾರ ಸಂಜೆ ನ್ಯಾಯಾಲಯದ ಆವರಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕಾರ್ಯಕ್ರಮದ ಸಂಕ್ಷಿಪ್ತ ಮಾಹಿತಿಯನ್ನು ನೀಡಿದರು. ಮಾನ್ಯ ನ್ಯಾಯಾಧೀಶರು ನೆರವೇರಿಸುವ ಶಂಕುಸ್ಥಾಪನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಜ್ಯ ಕಾರ್ಮಿಕ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರೂ ಆದ ವೆಂಕಟರಮಣಪ್ಪ ವಹಿಸಲಿದ್ದು, ವಿಶೇಷ ಆಹ್ವಾನಿತರಾಗಿ ಲೋಕಸಭಾ ಸದಸ್ಯ ಬಿ.ಎನ್.ಚಂದ್ರಪ್ಪ, ಮುಖ್ಯ ಅತಿಥಿಗಳಾಗಿ ಪ್ರಧಾನ ಜಿಲ್ಲಾ ಮತ್ತು ಶಸನ್ ನ್ಯಾಯಾಧೀಶ ಎಸ್.ಬಿ.ವಸ್ತ್ರಮಠ, ಅಪರ ಸಿವಿಲ್ ನ್ಯಾಯಾಧೀಶ ಕೋಟೆಪ್ಪ ಕಾಂಭ್ಳೆ, ಶಾಸಕ ಟಿ.ರಘುಮೂರ್ತಿ, ಲೋಕೋಪಯೋಗಿ ಇಲಾಖೆಯ ಅಧೀಕ್ಷಕ ಅಭಿಯಂತರ ಶಿವಾನಂದ ಬಣಕರ್, ಕಾರ್ಯಪಾಲಕ ಅಭಿಯಂತರ ಎನ್.ಸತೀಶ್‍ಬಾಬು, ಭಾಗವಹಿಸುವರು. ಈ ಸಂದರ್ಭದಲ್ಲಿ ಡಿವೈಎಸ್ಪಿ ಎಸ್.ರೋಷನ್ ಜಮೀರ್, ವಕೀಲರ ಸಂಘದ ಉಪಾಧ್ಯಕ್ಷ ಕುಮಾರ್ ಜಂಡೇಕುಂಟೆ, ಮಾಜಿ ಅಧ್ಯಕ್ಷ ಟಿ.ತಮ್ಮಣ್ಣ, ರಾಘವೇಂದ್ರನಾಯಕ ಮುಂತಾದವರು ಇದ್ದರು.
ವಕೀಲರ ಭವನದ ಶಂಕುಸ್ಥಾಪನಾ ಕಾರ್ಯಕ್ರಮಕ್ಕೆ ವಕೀಲರ ಸಂಘದ ಎಲ್ಲಾ ಪದಾಧಿಕಾರಿಗಳು, ಕಕ್ಷಿದಾರರು ಹಾಗೂ ನ್ಯಾಯಾಂಗ ಇಲಾಖೆಯ ಸಿಬ್ಬಂದಿ ವರ್ಗ ಆಗಮಿಸುವಂತೆ ವಕೀಲರ ಸಂಘದ ತಾಲ್ಲೂಕು ಅಧ್ಯಕ್ಷ ಜಿ.ಆರ್.ಅಶ್ವತ್ಥನಾಯಕ ಮನವಿ ಮಾಡಿದ್ಧಾರೆ

Recent Articles

spot_img

Related Stories

Share via
Copy link
Powered by Social Snap