ಹುಳಿಯಾರು:
ಏಕಾಗ್ರತೆ ಮನುಷ್ಯನಲ್ಲಿ ಆತ್ಮವಿಶ್ವಾಸ ಹೆಚ್ಚಿಸುವ ಸಾಧನವಾಗಿದೆ ಎಂದು ಸಬ್ಇನ್ಸ್ಪೆಕ್ಟರ್ ವಿಜಯಕುಮಾರ್ ತಿಳಿಸಿದರು.
ಪಟ್ಟಣದ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ಮೈಂಡ್ ಮೆಮೊರಿ ಹಾಗೂ ಮೆಡಿಟೇಷನ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಧ್ಯಾನದಿಂದ ನೆನಪಿನ ಶಕ್ತಿ ವೃದ್ಧಿಸುವ ಜತೆಗೆ ಮನಸ್ಸನ್ನು ಸದೃಢಗೊಳಿಸುತ್ತದೆ. ಗುರಿಯನ್ನು ಮುಂದಿಟ್ಟುಕೊಂಡು ನಡೆದರೆ ಸಾಧನೆ ಖಂಡಿತ ಲಭಿಸುತ್ತದೆ ಎಂದರು.
ಈಶ್ವರೀಯ ವಿಶ್ವವಿದ್ಯಾಲಯದ ಸಂಚಾಲಕಿ ಗೀತಾ ಮಾತನಾಡಿ, ಹುಳಿಯಾರಿನ ವರ್ತಕರಾದ ಲೋಕಾ ಪ್ರಭಾಕರ್ ಅವರು ಗ್ರಾಮೀಣ ಪ್ರದೇಶದ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಪ್ರತಿ ವರ್ಷ ಇಂತಹ ಕಾರ್ಯಕ್ರಮ ನಡೆಸಿಕೊಡುತ್ತಿದ್ದಾರೆ ಎಂದರು.
ತರಬೇತುದಾರ ಮಂಜುನಾಥ್ ವಿದ್ಯಾರ್ಥಿಗಳಿಗೆ ಏಕಾಗ್ರತೆ ಮತ್ತು ಧ್ಯಾನದ ಬಗ್ಗೆ ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ