ಬೆಂಗಳೂರು;
ಸ್ಥಳೀಯ ಸಂಸ್ಥೆ ಚುನಾವಣೆಗಳಿಂದ ಸಮ್ಮಿಶ್ರ ಸರ್ಕಾರಕ್ಕೆ ಮತದಾರರು ಸಂಪೂರ್ಣ ಸಹಮತ ವ್ಯಕ್ತ ಪಡಿಸಿದ್ದಾರೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು.
ಬೆಂಗಳೂರಿನ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬಿಜೆಪಿಯವರು ಉತ್ತರಕರ್ನಾಟಕಕ್ಕೆ ಬಂದಿಲ್ಲ ಎಂದು ಹೇಳುತ್ತಿದ್ದರು. ನಾವೂ ಕೂಡಾ ಚುನಾವಣಾ ಪ್ರಚಾರ ಮಾಡಲಿಲ್ಲ. ಆದರೆ, ಬಿಜೆಪಿಯವರು ತಂಡ-ತಂಡವಾಗಿ ಪ್ರಚಾರ ಮಾಡಿದರೂ ಕೂಡಾ ಹೆಚ್ಚಿನ ಮತ ಪಡೆಯುವಲ್ಲಿ ಹಿನ್ನೆಡೆ ಅನುಭವಿಸಿದೆ ಎಂದು ಹೇಳಿದರು.