ಹಿರಿಯೂರು :
ದಕ್ಷಿಣ ಕಾಶಿ ಎಂದು ಪ್ರಸಿದ್ಧವಾಗಿರುವ ಹಿರಿಯೂರಿನ ಶ್ರೀ ತೇರುಮಲ್ಲೇಶ್ವರ ಸ್ವಾಮಿಯ ಶ್ರಾವಣ ಮಾಸದ ಕಡೇ ಸೋಮವಾರದ ವಿಶೇಷಪೂಜಾ ಕಾರ್ಯಕ್ರಮ ಮುಂಜಾನೆಯಿಂದಲೇ ಭಕ್ತಿಭಾವದಿಂದ ನಡೆಯಿತು. ರುದ್ರಾಭಿಷೇಕ, ಅರ್ಚನೆ, ಹಾಗೂ ಹೂವಿನ ಅಲಂಕಾರ ಮಾಡಲಾಗಿತ್ತು, ತೀರ್ಥ ಪ್ರಸಾದ ವಿನಿಯೋಗ ನಡೆಯಿತು.
ಈ ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಹಾಗೂ ಮುಜರಾಯಿ ಅಧಿಕಾರಿಗಳಾದ ಜೆ.ಸಿ.ವೆಂಕಟೇಶಯ್ಯ ಹಾಗೂ ನಗರದ ಅನೇಕ ಭಕ್ತರು ಪೂಜಾ ಕಾರ್ಯದಲ್ಲಿ ಭಾಗವಹಿಸಿದ್ದರು. ಇದರ ಅಂಗವಾಗಿ ನಗರದ ಪ್ರಮುಖ ಬೀದಿಗಳಲ್ಲಿ ಸ್ವಾಮಿಯ ಪಲ್ಲಕ್ಕಿ ಉತ್ಸವ ನಡೆಯಿತು .
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
