ತುಮಕೂರು
ತುಮಕೂರು ತಾಲ್ಲೂಕಿನ ಊರ್ಡಿಗೆರೆ ಹೋಬಳಿಯ ಸೀತಕಲ್ಲುವಿನಲ್ಲಿ ಇಂದು ಸೀತಕಲ್ ಕೃಷ್ಣಯ್ಯನವರ ಅಧ್ಯಕ್ಷತೆಯಲ್ಲಿ ಊರ್ಡಿಗೆರೆ ಹೋಬಳಿ ಮಟ್ಟದ 2ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ.
ತುಮಕೂರು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್, ಊರ್ಡಿಗೆರೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ ಮತ್ತು ಸೀತಕಲ್ಲು ಹೊರ ನಿವಾಸಿಗಳ ಒಕ್ಕೂಟದ ಜಂಟಿ ಆಶ್ರಯದಲ್ಲಿ ಸಮ್ಮೇಳನ ಆಯೋಜಿಸಲಾಗಿದ್ದು, ನಾಳೆ ಬೆಳಗ್ಗೆ 7.30 ಗಂಟೆಗೆ ಧ್ವಜಾರೋಹಣ ನಡೆಯಲಿದೆ. ಸೀತಕಲ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷೆ ನರಸಮ್ಮ ರಾಷ್ಟ್ರಧ್ವಜವನ್ನು, ಊರ್ಡಿಗೆರೆ ಹೋಬಳಿ ಕಸಾಪ ಅಧ್ಯಕ್ಷ ಹೊನ್ನಾರು ರಂಗಸ್ವಾಮಿ ನಾಡಧ್ವಜವನ್ನು, ತುಮಕೂರು ತಾಲ್ಲೂಕು ಕಸಾಪ ಅಧ್ಯಕ್ಷೆ ಬಿ.ಸಿ.ಶೈಲಾನಾಗರಾಜ್ ಪರಿಷತ್ ಧ್ವಜವನ್ನು ಆರೋಹಣ ಮಾಡುವರು.
ನಾಳೆ ಬೆಳಗ್ಗೆ 9 ಗಂಟೆಗೆ ಶಾಸಕ ಡಿ.ಸಿ.ಗೌರಿಶಂಕರ್ ಕನ್ನಡ ಮಾತೆ ಭುವನೇಶ್ವರಿ ದೇವಿ ಮತ್ತು ಸಮ್ಮೇಳನಾಧ್ಯಕ್ಷರ ಮೆರವಣಿಗೆಯನ್ನು ಉದ್ಘಾಟಿಸುವರು. ಸೀತಕಲ್ಲು ಹೊರನಿವಾಸಿಗಳ ಒಕ್ಕೂಟದ ಅಧ್ಯಕ್ಷ ಎಸ್.ಎಂ.ಸಿದ್ದಪ್ಪ ಅಧ್ಯಕ್ಷತೆ ವಹಿಸುವರು. ಬೆಳಗ್ಗೆ 11 ಗಂಟೆಗೆ ಸೀತಕಲ್ ಕೃಷ್ಣಯ್ಯನವರ ಉಪಸ್ಥಿತಿಯಲ್ಲಿ, ಚಲನಚಿತ್ರ ನಟ ಎಸ್.ಶಿವರಾಂ ವೇದಿಕೆಯ ಸಮಾರಂಭ ಉದ್ಘಾಟಿಸುವರು. ಶ್ರೀ ಶಬರಿಮಲೈ ಅಯ್ಯಪ್ಪ ಸೇವಾ ಸಮಾಜಂ ರಾಷ್ಟ್ರೀಯ ಅಧ್ಯಕ್ಷ ಟಿ.ಬಿ.ಶೇಖರ್ ಅವರು ಅಧ್ಯಕ್ಷತೆ ವಹಿಸುವರು. ಜಿಲ್ಲಾ ಕಸಾಪ ಅಧ್ಯಕ್ಷೆ ಬಾ.ಹ.ರಮಾಕುಮಾರಿ ಅವರು ಪುಸ್ತಕ ಬಿಡುಗಡೆಗೊಳಿಸುವರು. ತಾಲ್ಲೂಕು ಕಸಾಪ ಅಧ್ಯಕ್ಷೆ ಶೈಲಾ ನಾಗರಾಜ್ ಆಶಯ ನುಡಿಗಳನ್ನಾಡುವರು. ಸೀತಕಲ್ ಕೃಷ್ಣಯ್ಯನವರ ಬದುಕು ಸಾಧನೆ ಕುರಿತು ತಿಪಟೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ಹೊನ್ನಾಂಜಿನಯ್ಯ ವಿಷಯ ಮಂಡಿಸುವರು.
ಮಧ್ಯಾಹ್ನ 1 ಗಂಟೆಗೆ ವಿಚಾರಗೋಷ್ಠಿ ನಡೆಯಲಿದ್ದು, ಸೀತಕಲ್ಲು ಗ್ರಾಮದ ಐತಿಹಾಸಿಕ ಹಿನ್ನೆಲೆ ಕುರಿತು ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ಆರ್.ಎನ್.ವೆಂಕಟಾಚಲಯ್ಯ ಅವರು ವಿಷಯ ಮಂಡಿಸುವರು. ಮಧ್ಯಾಹ್ನ 2 ಗಂಟೆಗೆ ಕವಿಗೋಷ್ಠಿ ನಡೆಯಲಿದ್ದು, ಹಿರಿಯ ಕವಿ ಸೀತಕಲ್ಲು ರಾಮಚಂದ್ರ ಅಧ್ಯಕ್ಷತೆ ವಹಿಸುವರು. ಕಲಾ ಮಂಜುನಾಥ್ ಆಶಯ ನುಡಿಗಳನ್ನಾಡಿ, ಕವಯತ್ರಿ ರಂಗಮ್ಮ ಹೊದೆಕಲ್ ಮುಂತಾದವರು ಮುಖ್ಯ ಅತಿಥಿಗಳಾಗಿರುವರು. ಮಧ್ಯಾಹ್ನ 3.30 ಗಂಟೆಗೆ ಸಮಾರೋಪ ಸಮಾರಂಭ, ಸಮ್ಮೇಳನಾಧ್ಯಕ್ಷರಿಗೆ ಗೌರವಾಭಿನಂದನೆ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭ ಜರುಗಲಿದೆ. ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಮಹಾಪೋಷಕ ಟಿ.ಬಿ.ಶೇಖರ್ ಅವರು ಅಧ್ಯಕ್ಷತೆ ವಹಿಸುವರು. ಮಕ್ಕಳ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರೊ.ಡಿ.ಚಂದ್ರಪ್ಪ ಸಮಾರೋಪ ಭಾಷಣ ಮಾಡಲಿದ್ದು, ದೊಂಬರನಹಳ್ಳಿ ನಾಗರಾಜ್ ನಿರೂಪಿಸುವರು







