ಬೆಳಗಾವಿ:
ಪ್ರತಿಷ್ಠೆಯ ಕಣವಾಗಿದ್ದ ಪಿಎಲ್ಡಿ ಬ್ಯಾಂಕ್ಗೆ ಹಿಂದಿನಿಂದಲೂ ಜಾರಕಿಹೊಳಿ ಬಣದವರೇ ಅವಿರೋಧವಾಗಿ ಆಯ್ಕೆಯಾಗುತ್ತಿದ್ದರು. ಆದರೆ ಈ ಬಾರಿ ಲಕ್ಷ್ಮೀ ಹೆಬ್ಬಾಳ್ಕರ್ ಬಣದವರು ಅವಿರೋಧ ಆಯ್ಕೆಯಾಗಿರುವುದು ಜಾರಕಿಹೊಳಿ ಬ್ರದರ್ಸ್ ಗೆ ಹಿನ್ನಡೆ ತಂದಿದೆ.
ಬೆಳಗಾವಿ ಪಿಎಲ್ಡಿ ಬ್ಯಾಂಕ್ಗೆ ಇಂದು ಚುನಾವಣೆ ನಿಗದಿಯಾಗಿತ್ತು. ಅದರಂತೆ ಬೆಳಗ್ಗೆ 10 ರಿಂದ 11 ರ ವರೆಗೆ ನಾಮಪತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು.
ಸತೀಶ್ ಜಾರಕಿಹೊಳಿ ಹಾಗೂ ರಮೇಶ್ ಜಾರಕಿಹೊಳಿ ಅವರ ಬೆಂಬಲಿತ ಅಭ್ಯರ್ಥಿಗಳು ನಾಮಪತ್ರವನ್ನೇ ಸಲ್ಲಿಸದೆ ಚುನಾವಣೆಯಿಂದ ಹಿಂದೆ ಸರಿದಿದ್ದರಿಂದ, ಲಕ್ಷ್ಮಿ ಹೆಬ್ಬಾಳ್ಕರ್ ಬಳಗದ ಮಹದೇವ್ ಪಟೇಲ್ ಅಧ್ಯಕ್ಷರಾಗಿ ಆಯ್ಕೆಯಾದರೆ, ಉಪಾಧ್ಯಕ್ಷರಾಗಿ ಜಮಾದಾರ್ ಆಯ್ಕೆ ಆಗಿದ್ದಾರೆ.
ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಸತೀಶ್ ಜಾರಕಿಹೊಳಿ ಅವರ ನಡುವೆ ಸಂಧಾನ ಮಾತುಕತೆ ನಡೆಸಲು ಆಗಮಿಸಿದ್ದ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ನಡೆಸದ ಸಂಧಾನ ಯಶಸ್ವಿಯಾದ ಕಾರಣ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ಅವಿರೋಧವಾಗಿ ಆಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ







