ಉಡುಪಿ:
ಮುಖ್ಯಮಂತ್ರಿಯಾದ ನಂತರ ಪ್ರಥಮ ಬಾರಿಗೆ ಉಡುಪಿ ಜಿಲ್ಲೆಗೆ ಭೇಟಿ ನೀಡಿದ ಎಚ್. ಡಿ.ಕುಮಾರಸ್ವಾಮಿ ಅವರು ಕೃಷ್ಣ ಮಠಕ್ಕೆ ತೆರಳಿ ಶ್ರೀಕೃಷ್ಣ ದೇವರ ದರ್ಶನದ ಬಳಿಕ ಪರ್ಯಾಯ ಮಠಾಧೀಶರ ಆಶೀರ್ವಾದ ಪಡೆದರು.
ಇಂದು ಸಿಎಂ ಕುಮಾರಸ್ವಾಮಿ ಕರಾವಳಿಯ ಜಿಲ್ಲೆಗೆ ಭೇಟಿ ನೀಡಿದ್ದು. ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ಸಿಎಂ ಜೊತೆಗೆ ವಿವಿಧ ಸಚಿವರು, ಶಾಸಕರು ,ಅಧಿಕಾರಿಗಳು ಪಾಲ್ಗೊಳ್ಳಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಸಮಗ್ರ ಅಭಿವೃದ್ಧಿ ವಿಚಾರಗಳ ಕುರಿತಂತೆ ಚರ್ಚೆ ನಡೆಸಲಿದ್ದಾರೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ.ಜಯಮಾಲ , ವಿಧಾನ ಪರಿಷತ್ತಿನ ಸದಸ್ಯ ಬೋಜೇ ಗೌಡ ಪಾಲ್ಗೊಂಡಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








