ಬೆಳಗಾವಿ ವಿಭಜನೆ : ಇಂದು ಸಿಎಂ ಮಹತ್ವದ ಸಭೆ

ಬೆಂಗಳೂರು:

      ಮಧ್ಯಾಹ್ನ ಮಹದಾಯಿ ನದಿನೀರಿನ ವಿವಾದ ಸೇರಿದಂತೆ ಹಲವು ಪ್ರಮುಖ ವಿಷಯಗಳ ಬಗ್ಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಿರಿಯ ಅಧಿಕಾರಿಗಳ ಜತೆ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು (ಸೆಪ್ಟೆಂಬರ್ 14) ಮಹತ್ವದ ಸಭೆ ನಡೆಸಲಿದ್ದಾರೆ.

      ಒಂದು ವೇಳೆ ಬೆಳಗಾವಿ ಜಿಲ್ಲೆಯನ್ನು ವಿಭಜಿಸಿದರೆ ಉಂಟಾಗಬಹುದಾದ ಆರ್ಥಿಕ ಹೊರೆ, ರಾಜಕೀಯ ಪರಿಣಾಮಗಳ ಕುರಿತು ಸಿಎಂ ಕುಮಾರಸ್ವಾಮಿ ಸಚಿವ ಸಂಪುಟದ ಹಿರಿಯ ಸಚಿವರೊಂದಿಗೂ ಮಾತುಕತೆ ನಡೆಸುವ ಸಾಧ್ಯತೆ ಇದೆ.

      ಅಲ್ಲದೆ ಮಹಾದಾಯಿ ನ್ಯಾಯಾಧಿಕರಣದ ಇತ್ತೀಚಿನ ಬೆಳವಣಿಗೆ, ಕಾವೇರಿ ನೀರಾವರಿ ನಿಗಮ ಬೋರ್ಡ್ ಮೀಟಿಂಗ್. ರಾಜೀವ್ ಗಾಂಧಿ ಆರೋಗ್ಯ ವಿವಿ ಸಂಬಂಧ ಸಭೆ. ವಾಣಿಜ್ಯ ತೆರಿಗೆ, ಅಬಕಾರಿ ಇಲಾಖೆ, ನೊಂದಣಿ ಮತ್ತು ಮುದ್ರಾಂಕ. ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳ ಜೊತೆ ಕುಮಾರಸ್ವಾಮಿ ಸಭೆ ನಡೆಸಲಿದ್ದಾರೆ.

    ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ