ಬ್ಯಾಡಗಿ:
ಶಾಲೆಗಳಲ್ಲಿನ ಗಂಟೆಗಳ ಸದ್ದು ಹೆಚ್ಚು ಕೇಳುವ ದೇಶವು ಅಭಿವೃದ್ಧಿಯಲ್ಲಿ ಮುಂಚೂಣಿಯಲ್ಲಿರಲು ಸಾಧ್ಯ ಶಿಕ್ಷಣವಂತ ವಿದ್ಯಾರ್ಥಿಗಳು ವೇಷಭೂಷಣದ ಬದಲಾಗಿ ಉತ್ತಮ ಆದರ್ಶದಿಂದ ಸಮಾಜದಲ್ಲಿ ಗುರ್ತಿಸಿಕೊಳ್ಳುವ ಮೂಲಕ ಶಿಕ್ಷಕರ ಋಣವನ್ನು ತೀರಿಸಬೇಕಿದೆ ಎಂದು ನಿವೃತ್ತ ಶಿಕ್ಷಕಿ ಎಸ್.ಎಸ್.ಮಹಾರಾಜಪೇಟೆ ಕರೆ ನೀಡಿದರು.
ಭಾನುವಾರ ಪಟ್ಟಣದ ಎಸ್‍ಎಸ್‍ಪಿಎಸ್ ಪ್ರೌಢಶಾಲೆಯ 2003-04 ನೇ ಸಾಲಿನ ವಿದ್ಯಾರ್ಥಿಗಳು ಶಾಲೆಯ ಆವರಣ ದಲ್ಲಿ ಆಯೋಜಿಸಿದ್ದ ಗುರುವಂದನಾ ಹಾಗೂ ಸ್ನೇಹ ಮಿಲನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಗುರು ಮತ್ತು ಶಿಷ್ಯರ ನಡುವೆ ಅವಿನಾಭಾವ ಸಂಬಂಧವಿದೆ, ಹೀಗಾಗಿ ಪುರಾಣ ಪುಣ್ಯಗಳ ಕಾಲದಿಂದಲೂ ಅದನ್ನು ವಿವಿಧ ರೀತಿಯಲ್ಲಿ ವಿಶ್ಲೇಷಿಸಲಾಗುತ್ತಿದೆ, ಇದಕ್ಕೆ ಪೂರಕವೆಂಬಂತೆ ಇತ್ತೀಚೆಗೆ ವಿದ್ಯಾರ್ಥಿಗಳು ಗುರುವಂದನೆ ಸಲ್ಲಿಸುವ ಮೂಲಕ ಮತ್ತೊಂದು ವಿಷೇಶ ಅರ್ಥ ನೀಡುತ್ತಿರುವುದು ಸಂತಸದ ವಿಷಯ ಎಂದರು.
ಇತ್ತೀಚಿನ ದಿನಗಳಲ್ಲಿ ಗುರುಗಳ ಮೇಲಿನ ಗೌರವ ಕಡಿಮೆಯಾಗುತ್ತಿರುವುದು ಖೇದದ ಸಂಗತಿಯಾದರೇ, ಇನ್ನೊಂ ದೆಡೆ ಕೆಲ ವಿದ್ಯಾರ್ಥಿಗಳು ಶಿಕ್ಷಣ ನೀಡಿದ ಗುರುಗಳನ್ನು ನೆನೆದು ಶಿಕ್ಷಕ ಗುರುವಂದನೆಯಂತಹ ಕಾರ್ಯಕ್ರಮಗಳನ್ನು ನಡೆಸುತ್ತಿರುವುದು ಶಿಕ್ಷಕರ ಗೌರವವನ್ನು ಹೆಚ್ಚಿಸುವಂತೆ ಮಾಡಿದೆ ಎಂದರು.
ಇದಕ್ಕೂ ಮುನ್ನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮುಖ್ಯ ಶಿಕ್ಷಕ ಎಂ.ಸಿ.ಹೊಸಮನಿ, ಶಿಕ್ಷಣದಿಂದ ಮಕ್ಕಳು ವಂಚಿತರಾದಲ್ಲಿ ಅದಕ್ಕಿಂತ ದೊಡ್ಡ ದುರಂತ ಬೇರೊಂದಿಲ್ಲ, ದೇಶದ ಪ್ರಗತಿಗೆ ಶಿಕ್ಷಣವೇ ಆಧಾರ ಸ್ಥಂಭವಾಗಿದ್ದು ಅದನ್ನು ಪಡೆದ ವ್ಯಕ್ತಿಗಳು ದೇಶಕ್ಕಾಗಿ ವಿನಿಯೋಗಿಸಬೇಕು ಅಂದಾಗ ಮಾತ್ರ ಸರ್ಕಾರದ ಉದ್ದೇಶಗಳು ಈಡೇರಲು ಸಾಧ್ಯವೆಂದರು.
ಎಸ್‍ಎಸ್‍ಪಿಎನ್ ಶಿಕ್ಷಣ ಸಂಸ್ಥೆಯ ಚೇರಮನ್ ಸಿ.ಕೆ.ಶೆಟ್ಟರ್ ಮಾತನಾಡಿ, ಇತ್ತೀಚೆಗೆ ಶಿಕ್ಷಕ ವೃಂದಕ್ಕೆ ಗೌರವ ನೀಡುವ ಗುರುವಂದನೆ ಕಾರ್ಯಕ್ರಮಗಳು ಹೆಚ್ಚಾಗಿ ನಡೆಯುತ್ತಿದ್ದು ಭಾರತೀಯ ಸಂಸ್ಕøತಿ ಮತ್ತು ಪರಂಪರೆಯನ್ನು ಹೆಚ್ಚಿಸಿದೆ, ಜ್ಞಾನ ದ ಹಸಿವನ್ನು ತೀರಿಸಿ ಬದುಕನ್ನು ರೂಪಿಸುತ್ತಿರುವ ಶಿಕ್ಷಕರ ಸೇವೆ ಅವಿಸ್ಮರಣೀಯ, ಶೆಕ್ಷಣಿಕವಾಗಿ ವಿದ್ಯಾರ್ಥಿ ಗಳನ್ನು ಪ್ರಭುದ್ಧಗೊಳಿಸಿದ ಶಿಕ್ಷಕರ ಸೇವೆಯನ್ನು ಸ್ಮರಿಸುತ್ತಿರುವ ಕಾರ್ಯಕ್ರಮ ಅರ್ಥಪೂರ್ಣ ಎಂದರು.
ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕ ಎಸ್.ಬಿ.ತವರದ, ಶಿಕ್ಷಕರಾದ ಬಿ.ಎಫ್.ದೊಡ್ಮನಿ, ಎಸ್.ಎನ್.ಪೋಲೇಶಿ, ಜಿ.ಎಸ್. ಅಂಕಲಕೋಟಿ, ಎಂ.ವಿ.ನೆಲವಗಿ, ಎಸ್.ಸಿ.ಯಲಿ, ಎಸ್.ಎ.ಆಣೂರ ಶೆಟ್ಟರ, ಎ.ಕೆ.ಕುಲಕರ್ಣಿ, ವೀರನಗೌಡ ಪಾಟೀಲ ಕೆ.ಅವಿನಾಶ ಬಸವರಾಜ ಸಂಕಣ್ಣನವರ, ಜ್ಯೋತಿ ಬನ್ನಿಹಟ್ಟಿ, ಶಿವಕುಮಾರ ಕಲ್ಲಾಪುರ, ಗಿರೀಶ ಕೊಪ್ಪದ, ವಿನಾಯಕ, ಶಿವು ಕಮ್ಮಾರ, ಸಂತೋಷ ಬಡಿಗೇರ, ಗಣೇಶ ಬಣಕಾರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ತೌಸಿಫ್ ಕಲ್ಮನಿ, ಸ್ವಾಗತಿಸಿದರು, ಜ್ಯೋತಿ ಬನ್ನಿಹಟ್ಟಿ ನಿರೂಪಿಸಿದರು. ರಾಜಶೇಖರ ಗೊಂದಿಮಲ್ಲ ವಂದಿಸಿದರು.