ಮಹಾರಾಷ್ಟ್ರದ ಮಾಜಿ ಕಾರ್ಪೋರೇಟರ್ ಎಸ್‍ಐಟಿ ವಶಕ್ಕೆ

ಬೆಂಗಳೂರು:

                ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿರುವ ಮಹಾರಾಷ್ಟ್ರದ ಮಾಜಿ ಕಾರ್ಪೋರೇಟರ್ ಶ್ರೀಕಾಂತ್ ಪನ್ಗಾರ್ಕರ್‍ನನ್ನು ವಿಶೇಷ ತನಿಖಾ ತಂಡ(ಎಸ್‍ಐಟಿ)ಅಧಿಕಾರಿಗಳು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದ್ದಾರೆ.

                ಗೌರಿ ಹತ್ಯೆಗೆ ಸಹಾಯ ಮಾಡಿರುವ ಮಾಹಿತಿ ಆಧರಿಸಿ ಮಹಾರಾಷ್ಟ್ರದ ಮಾಜಿ ಕಾರ್ಪೋರೇಟರ್ ಶ್ರೀಕಾಂತ್ ಪನ್ಗಾರ್ಕರ್‍ನನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಲಾಗಿದೆ ಎಂದು ಎಸ್‍ಐಟಿ ಅಧಿಕಾರಿಗಳು ತಿಳಿಸಿದ್ದಾರೆ

                ಶ್ರೀಕಾಂತ್ ಪನ್ಗಾರ್ಕರ್ ಚಿಂತಕ ದಾಬೋಲ್ಕರ್ ಹತ್ಯೆಯ ಆರೋಪಿಗಳಿಗೆ ಸಹಾಯ ಮಾಡಿದ ಆರೋಪದ ಮೇರೆಗೆ ಅಲ್ಲಿನ ಎಸ್‍ಐಟಿ  ಅಧಿಕಾರಿಗಳು ಬಂಧಿಸಿದ್ದರು ಅವರಿಂದ ವಶಕ್ಕೆ ತೆಗೆದುಕೊಂಡಿರುವ ಶ್ರೀಕಾಂತ್‍ನನ್ನು ರಾಜ್ಯದ ಎಸ್‍ಐಟಿ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.

                   ವಿಚಾರವಾದಿಗಳು, ಚಿಂತಕರ ಹತ್ಯೆಗೆ ಹಣಕಾಸು ಸಹಾಯ ಮಾಡಿದ್ದ ಅನ್ನೋದು ಎಟಿಎಸ್ ತನಿಖೆಯಲ್ಲಿ ಬೆಳಕಿಗೆ ಬಂದಿತ್ತು. ಗೌರಿ ಹಂತಕರಿಗೆ ಸಹಾಯ ಮಾಡಿರುವ ಶಂಕೆ ಮೇರೆಗೆ ಮುಂಬೈ ಜೈಲಿನಿಂದ ಮಾಜಿ ಕಾರ್ಪೋರೇಟರನನ್ನು ಬಾಡಿ ವಾರೆಂಟ್ ಮೂಲಕ ಬೆಂಗಳೂರಿಗೆ ಕರೆ ತಂದು ವಿಚಾರಣೆ ನಡೆಸಿ ಕೋರ್ಟ್‍ಗೆ ಹಾಜರುಪಡಿಸಿ ಮತ್ತೆ ತಮ್ಮ ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

    

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link