ಹಾವೇರಿ:
ರಾಷ್ಟ್ರೀಯ ಪೋಷಣಾ ಅಭಿಯಾನದಡಿ ಸಮುದಾಯ ಆಧಾರಿತ ಚಟುವಟಿಕೆಗಳ ಸಮಗ್ರ ಪೋಷಣಾ ಅಭಿಯಾನ ಜನಾಂದೋಲನ ಕಾರ್ಯಕ್ರಮ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ವತಿಯಿಂದ ಇತ್ತೀಚೆಗೆ ಅಗಡಿ ಗ್ರಾಮದಲ್ಲಿ ಆಯೋಜಿಸಲಾಗಿತ್ತು.
ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಶ್ರೀಮತಿ ಉಮಾ.ಕೆ.ಎಸ್ ಉದ್ಘಾಟನೆ ನೆರವೇರಿಸಿದರು. ಗ್ರಾಮ ಪಂಚಾಯತಿಯ ಅಧ್ಯಕ್ಷೆ ಶ್ರೀಮತಿ ಇಮಾಂಬಿ ಹೊಂಬರಡಿ ಅವರು ಅಧ್ಯಕ್ಷತೆ ವಹಿಸಿದ್ದರು. ತಾಲೂಕಿನ ಆಶಾ ಕಾರ್ಯಕರ್ತೆಯರ ಮೇಲ್ವಿಚಾರಕರಾದ ಜಯಶೀಲಾ ಅವರು ಆರೋಗ್ಯದ ಕುರಿತು ಉಪನ್ಯಾಸ ನೀಡಿದರು. ನಿಜಲಿಂಗಪ್ಪ ಬಸೇಗಣ್ಣಿ ಪೌಷ್ಕಿಕ ಆಹಾರ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಮೇಲ್ವಿಚಾರಕಿಯರು, ಅಂಗನವಾಡಿ ಕಾರ್ಯಕರ್ತೆಯರು, ಕಿರಿಯ ಆರೋಗ್ಯ ಮಹಿಳಾ ಸಹಾಯಕಿಯರು, ಆಶಾ ಕಾರ್ಯಕರ್ತೆರು, ಮುಖ್ಯೋಪಾಧ್ಯಯರು ಶಿಕ್ಷಕರು, ಗ್ರಾಮದ ಗರ್ಭಿಣಿ ಮತ್ತು ಬಾಣಂತಿಯರು, ಮಕ್ಕಳು ಭಾಗವಹಿಸಿದ್ದರು.ಇದೇ ಸಂದರ್ಭದಲ್ಲಿ ಮೊದಲಸಲ ಗರ್ಭಿವತಿಯಾದ ಮಹಿಳೆಯರಿಗೆ ಸೀಮಂತ ಕಾರ್ಯಕ್ರಮ ನೆರವೇರಿಸಲಾಯಿತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ