ಸರ್ಕಾರದ ಸೌಲಭ್ಯವನ್ನು ಪಡೆದುಕೊಳ್ಳುವಂತೆ ಕರೆ : ಮುರುಗೇಂದ್ರ ತುಬಾಕೆ

ಬಳ್ಳಾರಿ:

        ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ ಮತ್ತು ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಹೊಸ ಮೋಕಾದ ಕಾಲೇಜು ಮೈದಾನದಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಕಾನೂನು ಸಾಕ್ಷರತಾ ರಥ ಯಾತ್ರೆಯನ್ನು 5ನೇ ಅಪರ ಸಿವಿಲ್ ನ್ಯಾಯಾಧೀಶ ಮುರುಗೇಂದ್ರ ತುಬಾಕೆ ಅವರು ಸಸಿಗೆ ನೀರು ಹಾಕುವ ಮೂಲಕ ಚಾಲನೆ ನೀಡಿದರು .

       ಈ ಸಂದರ್ಭದಲ್ಲಿ ಮಾತನಾಡಿದ ಅವರು, ಜ್ಞಾನವನ್ನು ಎಲ್ಲರಿಗೂ ಹಂಚಬೇಕು. ಈ ಸಾಕ್ಷರತಾ ರಥದಲ್ಲಿ ಸರ್ಕಾರದ ಯೋಜನೆಗಳ ಅರಿವು ಮೂಡಿಸುವಂತಹ ರಥವಾಗಿದ್ದು, ಇದರ ಮಾಹಿತಿಯನ್ನು ಪಡೆದುಕೊಂಡು ಸರ್ಕಾರದ ಸೌಲಭ್ಯವನ್ನು ಪಡೆದುಕೊಳ್ಳಬೇಕು ಎಂದರು.

        ಮುಖ್ಯ ಅತಿಥಿಗಳಾಗಿ ಆಗಮಿಸಿದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಎಸ್.ಬಿ.ಹಂದ್ರಾಳ್ ಅವರು ಮಾತನಾಡಿ, ಬೆಂಗಳೂರಿನ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಕಾನೂನು ಸಾಕ್ಷರತಾ ರಥ ಯಾತ್ರೆಗೆ ವಾಹನವನ್ನು ನೀಡಿದ್ದು, ಈ ವಾಹನದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಯೋಜನೆಗಳ ಸಂಕ್ಷೀಪ್ತ ನೀಡಿ, ಅರಿವು ಮೂಡಿಸುವಂತ ಕಾರ್ಯ ಮಾಡಲಿದ್ದಾರೆ ಎಂದು ಅವರು ಸವಿವರವಾಗಿ ಸಾರ್ವಜನಿಕರಿಗೆ ತಿಳಿಸಿದರು.

       ಪ್ಯಾನೆಲ್ ವಕೀಲರಾದ ಎಮ್.ಪುಷ್ಪಲತ ಅವರು ಮಾತನಾಡಿ, ಬಾಲ್ಯವಿವಾಹ ನಿಷೇಧ ಕಾಯ್ದೆ ಹಾಗೂ ಮಕ್ಕಳ ಕಳ್ಳ ಸಾಕಾಣಿಕೆ ನಿಷೇಧ ಕಾಯ್ದೆಯ ಬಗ್ಗೆ ವಿವರಿಸುತ್ತಾ, ಬಾಲಕೀಯರಿಗೆ 18 ವರ್ಷ ಮತ್ತು ಬಾಲಕರಿಗೆ 21 ವರ್ಷಕ್ಕಿಂತ ಮುಂಚೆ ಮದುವೆ ಆಗಬಾರದು. ಇದು ಕಾನೂನು ಪ್ರಕಾರ ಅಪರಾಧ. ಬಾಲ್ಯವಿವಾಹಕ್ಕೆ ಒಳಗಾಗಿದ್ದಲ್ಲಿ 1098 ಸಹಾಯವಾಣಿಗೆ ಕರೆ ಮಾಡಿದಲ್ಲಿ, ಕರೆ ಮಾಡಿದವರ ಹೆಸರನ್ನು ಗೌಪ್ಯವಾಗಿಡುವುದಲ್ಲದೇ ಒಂದು ಗಂಟೆಯೊಳಗಾಗಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಬಾಲ್ಯವಿವಾಹವನ್ನು ತಡೆಗಟ್ಟಲಾಗುತ್ತದೆ ಎಂದರು.

        ಬಾಲಕಾರ್ಮಿಕ ಯೋಜನಾಧಿಕಾರಿ ಮೌನೇಶ್ ಅವರು ಮಾತನಾಡಿ, ಬಾಲಕಾರ್ಮಿಕ ಪದ್ಧತಿಯನ್ನು ತಡೆಗಟ್ಟಬೇಕು. ಬಾಲಕಾರ್ಮಿಕ ಪದ್ಧತಿ ಎಲ್ಲಾದರೂ ಕಂಡು ಬಂದಲ್ಲಿ ಕಾನೂನಿನ ಪ್ರಕಾರ ಅವರ ಮೇಲೆ ಕ್ರಮ ಜರುಗಿಸಲಾಗುತ್ತದೆ. ಬಾಲ ಕಾರ್ಮಿಕ ಪದ್ಧಿತಿಯನ್ನು ನಿರ್ಮೂಲನೆ ಮಾಡಲು ಎಲ್ಲರ ಸಹಕಾರ ಅಗತ್ಯ ಎಂದು ಅವರು ಹೇಳಿದರು.

        ಶಿಕ್ಷಣ ಇಲಾಖೆಯ ಅಧಿಕಾರಿ ಮಯೂರ ಅವರು ಮಾತನಾಡಿ ಶಾಲಾಮಕ್ಕಳಿಗೆ ವಾರದಲ್ಲಿ 5 ದಿನ ಹಾಲನ್ನು ನೀಡುತ್ತಿದ್ದು, ಉಚಿತ ಶಿಕ್ಷಣ ನೀಡಲಾಗುತ್ತಿದೆ ಎಂದರು.ಈ ಸಂದರ್ಭದಲ್ಲಿ ಜಿಪಂ ಸದಸ್ಯ ಹಂಪಮ್ಮ, ವಕೀಲರ ಸಂಘದ ಅಧ್ಯಕ್ಷ ಬದರಿನಾಥ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಜಾನಕಿರಾಮ, ಪೂರ್ವವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ ರಾಮಚಂದ್ರಪ್ಪ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಜಿ.ಕೆ.ಕೃಷ್ಣಮ್ಮ, ವಕೀಲರ ಸಂಘದ ಕಾರ್ಯದರ್ಶಿ ಜಿ.ಎಮ್.ರವಿರಾಜಶೇಖರೆಡ್ಡಿ, ತಾಪಂ ಸದಸ್ಯ ಚನ್ನಪ್ಪ, ಗ್ರಾಪಂ ಅಧ್ಯಕ್ಷೆ ನಾಗಮ್ಮ ಸೇರಿದಂತೆ 200ಕ್ಕೂ ಹೆಚ್ಚು ಶಾಲಾ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಇದ್ದರು.     

                  ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link