ದಾವಣಗೆರೆ :
ಬರುವ ಅಕ್ಟೋಬರ್ 2ರಂದು ರಾಷ್ಟ್ರಪಿತ ಮಹಾತ್ಮಾಗಾಂಧಿ ಹಾಗೂ ಲಾಲ್ ಬಹಾದ್ದೂರ ಶಾಸ್ತ್ರಿ ಜಯಂತಿಯನ್ನು ಅರ್ಥ ಪೂರ್ಣವಾಗಿ ಆಚರಿಸಲು ಜಿಲ್ಲಾಡಳಿತ ಭವನದಲ್ಲಿ ಬುಧವಾರ ನಡೆದ ಗಾಂಧಿ ಜಯಂತಿ ಪೂರ್ವ ಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು.
ಜಿಲ್ಲಾಧಿಕಾರಿ ಡಿ.ಎಸ್ ರಮೇಶ್ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯಲ್ಲಿ ಈ ಇಬ್ಬರೂ ಮಹಾತ್ಮರ ಜಯಂತಿಯನ್ನು ಮಹಾನಗರ ಪಾಲಿಕೆಯ ಆವರಣದಲ್ಲಿ ಬೆಳಿಗ್ಗೆ 9 ಗಂಟೆಗೆ ಆಚರಿಸಲು ತೀರ್ಮಾನಿಸಲಾಯಿತು.
ಜಿಲ್ಲಾಧಿಕಾರಿ ಡಿ.ಎಸ್.ರಮೇಶ್ ಮಾತನಾಡಿ, ಗಾಂಧಿ ತತ್ವಗಳ ಬಗೆಗೆ ಉಪನ್ಯಾಸಕರಿಂದ ಉಪನ್ಯಾಸ ಏರ್ಪಡಿಸುವುದು, ಮಕ್ಕಳಿಂದ ವಿವಿಧ ಧರ್ಮಗಳ ಶ್ಲೋಕಗಳನ್ನು ಪಠಿಸುವುದು, ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಭಜನಾ ಕಾರ್ಯಕ್ರಮ ಹಾಗೂ ಅಂಧ ಶಾಲಾ ಮಕ್ಕಳಿಂದ ಸಂಗೀತಗಳ ಕಾರ್ಯಕ್ರಮ ಏರ್ಪಡಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ವಿದ್ಯಾರ್ಥಿಗಳು, ಅಧಿಕಾರಿಗಳು ಹಾಗೂ ಸಾರ್ವಜನಿಕರ ಸಹಕಾರದೊಂದಿಗೆ ಸ್ವಚ್ಚತಾ ಕಾರ್ಯಕ್ರಮ ಏರ್ಪಡಿಸಲಾಗುವುದು ಎಂದರು.
ಶಿಷ್ಠಾಚಾರದಂತೆ ಆಹ್ವಾನ ಪತ್ರಿಕೆ ಮುದ್ರಿಸಿ ಗಣ್ಯರಿಗೆ ವಿತರಿಸುವುದು, ವೇದಿಕೆ ನಿರ್ಮಾಣದ ಜವ್ದಾರಿಯನ್ನು ಮಹಾನಗರ ಪಾಲಿಕೆಯ ಅಧಿಕಾರಿಗಳಿಗೆ ಸೂಚಿಸಲಾಯಿತು. ಹಾಗೂ ಶುದ್ದ ಕುಡಿಯುವ ನೀರಿನ ವ್ಯವಸ್ಥೆಯನ್ನು ಕಲ್ಪಿಸುವಂತೆ ತಿಳಿಸಲಾಯಿತು. ಸುಮಾರು 500 ಮಕ್ಕಳಿಗೆ ಉಪಹಾರದ ವ್ಯವಸ್ಥೆಯನ್ನು ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ನೇತೃತ್ವದಲ್ಲಿ ನೇರವೇರಿಸುವುದು, ಇವರಿಗೆ ಲೋಕೋಪಯೋಗಿ ಹಾಗೂ ಪಾಲಿಕೆಯ ಅಧಿಕಾರಿಗಳು ಸಹಕರಿಸುವಂತೆ ಸೂಚಿಸಲಾಯಿತು. ಜಯಂತಿ ಆಚರಣೆಯಂದು ಎಲ್ಲಾ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಡ್ಡಾಯವಾಗಿ ಹಾಜರಿರುವಂತೆ ಸೂಚಿಸಿದರು.
ಸಭೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ತ್ರಿಪುಲಾಂಭ, ಆಹಾರ ಇಲಾಖೆಯ ಉಪ ನಿರ್ದೇಶಕ ಮಂಜುನಾಥನ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶರಣಪ್ಪ ಮುದಗಲ್ಲ, ತಹಶೀಲ್ದಾರ್ ಸಂತೋಷ ಕುಮಾರ್, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್ ಬೆಕ್ಕೇರಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








