ನವದೆಹಲಿ
ಕಾಂಗ್ರೆಸ್ ಹೈಕಮಾಂಡ್ ಗೆ ಸಚಿವ ಡಿಕೆ ಶಿವಕುಮಾರ್ ಹಾಗ ಇತರರು ಕೋಟಿಗಟ್ಟಲೆ ಹಣ ಕೊಟ್ಟಿದ್ದಾರೆ ಎನ್ನುವುದು ಶುದ್ಧ ಸುಳ್ಳು, ಬಿಜೆಪಿಯವರಿಗೆ ಸುಳ್ಳು ಬಿಟ್ಟರೆ ಬೇರೇನು ಹೇಳಲು ಬರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಡಿ.ಕೆ. ಶಿವಕುಮಾರ್ ಕಾಂಗ್ರೆಸ್ನ ಎಟಿಎಂ: ಸಂಬಿತ್ ಪಾತ್ರಾ ಆರೋಪ ನವದೆಹಲಿಯಲ್ಲಿ ಬುಧವಾರ ಸಂಜೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರಾ ಮಾಡಿರುವ ಆರೋಪಕ್ಕೆ ಪ್ರತಿಕ್ರಿಯೆ ನೀಡಿ, ಸಂಬಿತ್ ಪಾತ್ರಾ ಆರೋಪ ಮಾಡಿರುವಂತೆ ಹೈಕಮಾಂಡ್ ಗೆ, ಸೋನಿಯಾ ಗಾಂಧಿ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಯಾವುದೇ ನಾಯಕರಿಗೆ ಯಾವುದೇ ಸಚಿವರು ಹಾಗೂ ಮುಖಂಡರು ಹಣ ಸರಬರಾಜು ಮಾಡಿಲ್ಲ, ಇಂತಹ ಸುಳ್ಳುಗಳನ್ನು ಹೇಳುವುದರಲ್ಲಿ ಬಿಜೆಪಿಯವರು ನಿಸ್ಸೀಮರು ಎಂದು ವಾಗ್ದಾಳಿ ನಡೆಸಿದರು.
‘ಕೇಜಿ ಲೆಕ್ಕದಲ್ಲಿ ಹಣ ತೂಕ ಹಾಕಿ ಕೈ ಹೈ ಕಮಾಂಡ್ ಗೆ ತಲುಪಿಸಿದ್ದಾರೆ’ ಇದೇ ವೇಳೆ ನಾನು ಡಿಕೆ ಶಿವಕುಮಾರ್ ಜೊತೆ ಮಾತನಾಡಿದ್ದು, ಇದೊಂದು ಶುದ್ಧ ಸುಳ್ಳು, ಕಾನೂನು ಪ್ರಕಾರ ಏನೇನು ಆಗಬೇಕೋ ಅದು ಆಗುತ್ತದೆ ಎಂದು ಸಮರ್ಥಿಸಿಕೊಂಡರು. ಇದೇ ವೇಳೆ ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಜೊತೆ ಮಾತುಕತೆ ನಡೆಸಿದ್ದು ಅಪೂರ್ಣವಾಗಿದೆ. ಈ ಬಗ್ಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರೊಂದಿಗೆ ಇನ್ನೊಂದು ಸುತ್ತಿನ ಮಾತುಕತೆ ನಡೆಸಿ ಅಭ್ಯರ್ಥಿಗಳ ಆಯ್ಕೆಯನ್ನು ಅಂತಿಮಗೊಳಿಸಲಾಗುವುದು ಎಂದು ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
