ನವದೆಹಲಿ
ಕಾಂಗ್ರೆಸ್‍ನ ನಾಯಕರ ಅಹಂಭಾವನೆ ತೃಪ್ತಿಪಡಿಸಲು ರಫೇಲ್ ಸಮರ ವಿಮಾನ ಖರೀದಿ ಒಪ್ಪಂದದ ಬಗ್ಗೆ ತನಿಖೆ ನಡೆಸಲು ಸಾಧ್ಯವಿಲ್ಲ ಎಂದು ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ. ದೆಹಲಿಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವ್ಯವಹಾರದಲ್ಲಿ ಯಾವುದೇ ಅಕ್ರಮ-ಅವ್ಯವಹಾರಗಳು ನಡೆದಿಲ್ಲ. ಕಾಂಗ್ರೆಸ್ ನಾಯಕರೊಬ್ಬರನ್ನು ಸಮಾಧಾನ ಮಾಡುವುದಕ್ಕೋಸ್ಕರ ಈ ಒಪ್ಪಂದದ ಬಗ್ಗೆ ತನಿಖೆ ನಡೆಸಲಾಗದು ಎಂದು ಸ್ಪಷ್ಟಪಡಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
