ದೆಹಲಿ:
ಕೆಟ್ಟ ಮೇಲೆ ಬುದ್ಧಿ ಬಂದಂತೆ ಪಾಕಿಸ್ಥಾನ ಪ್ರಧಾನಿ ಇಮ್ರಾನ್ ಖಾನ್ ಗೆ ನಮ್ಮ ದೇಶದ ನೆನಪಿಗೆ ಬಂದಿದೆ ಅವರ ಎರಡು ದಿನದ ಯು ಎ ಇ ಪ್ರವಾಸದಿಂದ ವಾಪಸ್ಸಾದ ಅವರು ಭಾರತದ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ತಮ್ಮ ಹಾಗು ಭಾರತದ ನಡುವಿನ ದ್ವಿಪಕ್ಷೀಯ ಮಾತುಕತೆ ಪುನಾರಂಭಿಸುವ ಪ್ರಸ್ತಾವನೆ ಇಟ್ಟಿದ್ದಾರೆ.
ನ್ಯೂಯಾರ್ಕ್ ನಲ್ಲಿ ಈ ತಿಂಗಳ ಕೊನೆಯಲ್ಲಿ ನಡೆಯಲಿರುವ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾರತದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ಪಾಕಿಸ್ತಾನದ ವಿದೇಶಾಂಗ ಸಚಿವ ಷಾ ಮೆಹ್ಮೂದ್ ಖುರೇಶಿ ನಡುವೆ ಸಭೆ ನಡೆಸುವ ಬಗ್ಗೆ ಪರಿಶೀಲಿಸುವಂತೆ ಪತ್ರದಲ್ಲಿ ಮನವಿ ಮಾಡಿದ್ದಾರೆ. ಎರಡು ದೇಶಗಳ ನಡುವೆ ಅರ್ಥಪೂರ್ಣ ಹಾಗೂ ರಚನಾತ್ಮಕ ಮೈತ್ರಿಯಾಗುವುದನ್ನು ಬಯಸುತ್ತೇನೆ ಎಂಬ ಮೋದಿಯವರ ಮಾತಿಗೆ ಪ್ರತಿಕ್ರಿಯೆಯಾಗಿ ಇಮ್ರಾನ್ ಖಾನ್ ಈ ಪತ್ರ ಬರೆದಿದ್ದಾರೆ ಎಂದು ಮೂಲಗಳು ತಿಳಿಸಿವೆ .
ವಿವಾದಗಳನ್ನು ಬಗೆಹರಿಸಲು ಭಾರತ ಒಂದು ಹೆಜ್ಜೆ ಮುಂದಿಟ್ಟರೆ ಪಾಕಿಸ್ತಾನ ಎರಡು ಹೆಜ್ಜೆ ಮುಂದಿಡುತ್ತದೆ ಎಂದು ಇಮ್ರಾನ್ ಖಾನ್ ಪಾಕ್ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದಾಗ ತಿಳಿಸಿದ್ದರು. ಉಭಯ ದೇಶಗಳ ನಡುವೆ ದ್ವಿಪಕ್ಷೀಯ ಸಮಗ್ರ ಮಾತುಕತೆ ನಡೆಸಲು 2015ರಲ್ಲಿ ಪ್ರಯತ್ನಿಸಲಾಗಿತ್ತು. ಪಠಾಣ್ಕೋಟ್ ದಾಳಿ ಹಿನ್ನೆಲೆಯಲ್ಲಿ ಮಾತುಕತೆ ಸ್ಥಗಿತಗೊಂಡಿತ್ತು. ಇನ್ನು ಮುಂದಾದರು ಎರಡೂ ರಾಷ್ಟ್ರಗಳು ಮಾತುಕತೆಯ ಭಿನ್ನಾಭಿಪ್ರಾಯಗಳು , ಕಾಶ್ಮೀರ ಸಮಸ್ಯೆಯನ್ನು ಬಗೆಹರಿಸಿಕೊಳ್ಳಲು ಮುಂದಾಗಬೇಕು ಎಂದು ಖಾನ್ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ







