ಬೆಂಗಳೂರು:
ಚಂದನವನದ ಹಿರಿಯ ನಟ, ಸದಾಶಿವ ಬ್ರಹ್ಮಾವರ್ ಅವರು ನಿನ್ನೆ(ಬುಧವಾರ) ಮಧ್ಯಾನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
90 ವರ್ಷ ವಯಸ್ಸಿನ ಬ್ರಹ್ಮಾವರ್ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರು ಸಾವಿಗೂ ಮುಂಚೆ, ಸಾವಿನ ಸುದ್ದಿ ‘ಕುಟುಂಬದವರನ್ನು ಹೊರತುಪಡಿಸಿ ಯಾರಿಗೂ ತಿಳಿಯಬಾರದು’ ಎಂದು ಮಕ್ಕಳಿಗೆ ಸೂಚಿಸಿದ್ದರು ಎನ್ನಲಾಗಿದೆ.
ಕನ್ನಡದ ನೂರಾರು ಚಿತ್ರಗಳಲ್ಲಿ ಪೋಷಕ ಪಾತ್ರಗಳನ್ನು ನಿರ್ವಹಿಸಿದ್ದ ಇವರು ಮರೆವಿನ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








