ಅಪರಿಚಿತ ವಾಹನ ಡಿಕ್ಕಿ ಹೊಡೆದು ಬೈಕ್‍ ಸವಾರ ಸಾವು

ಬೆಂಗಳೂರು:

     ಕತ್ತಲಲ್ಲಿ ವೇಗವಾಗಿ ಬಂದ ಅಪರಿಚಿತ ವಾಹನ ಡಿಕ್ಕಿ ಹೊಡೆದು ಬುಲೆಟ್ ಬೈಕ್‍ನಲ್ಲಿ ಹೋಗುತ್ತಿದ್ದ ಟಿವಿ ಶೋರೂಂ ಮಾಲೀಕರೊಬ್ಬರು ಮೃತಪಟ್ಟಿರುವ ದುರ್ಘಟನೆ ಕೆಂಗೇರಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ನೈಸ್ ರಸ್ತೆಯಲ್ಲಿ ಬುಧವಾರ ರಾತ್ರಿ ನಡೆದಿದೆ.

     ಮೃತಪಟ್ಟವರನ್ನು ಅಂಜನಾಪುರದ ರಾಘವೇಂದ್ರ (26) ಎಂದು ಗುರುತಿಸಲಾಗಿದೆ. ಹೆಸರುಘಟ್ಟದಲ್ಲಿ ಟಿವಿ ಶೋರೂಂ ನಡೆಸುತ್ತಿದ್ದ ರಾಘವೇಂದ್ರ ಅವರು ರಾತ್ರಿ 9.45ರ ವೇಳೆ ಶೋರೂಂಗೆ ಬೀಗ ಹಾಕಿ ಮನೆಗೆ ಬುಲೆಟ್ ಬೈಕ್‍ನಲ್ಲಿ ವಾಪಸ್ಸಾಗುತ್ತಿದ್ದರು.

     ಮಾರ್ಗಮಧ್ಯೆ ನೈಸ್ ರಸ್ತೆಯ ಬೈರವ ಬಿಲ್ಡಿಂಗ್ ಬಳಿಯ ಕೆಳಸೇತುವೆ ರಸ್ತೆಯಲ್ಲಿ ಹೋಗುತ್ತಿದ್ದಾಗ ಕತ್ತಲಲ್ಲಿ ವೇಗವಾಗಿ ಬಂದ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದೆ.

     ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ರಾಘವೇಂದ್ರ ಅವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.ಪ್ರಕರಣ ದಾಖಲಿಸಿರುವ ಕೆಂಗೇರಿ ಸಂಚಾರ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

                  ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link