ಬಾಗಲಕೋಟೆ:
ಪ್ರದಾನಮಂತ್ರಿ ನರೇಂದ್ರಮೋದಿ ಅವರನ್ನು ಕಳ್ಳ ಎಂದು ಹೇಳಿಕೆ ನೀಡಿರುವ ಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಒಬ್ಬ ಅಯೋಗ್ಯ ಎಂದು ಬಾಗಲಕೋಟೆ ಶಾಸಕ ವೀರಣ್ಣ ಚರಂತಿಮಠ ಅವರು ರಾಹುಲ್‍ಗಾಂಧಿ ಅವರ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದರು.
ಬಾಗಲಕೋಟೆಯಲ್ಲಿ ಮಾತನಾಡುತ್ತಿದ್ದ ಅವರು, ಪ್ರಾಮಾಣಿಕರನ್ನು ಕಳ್ಳ ಎಂದು ಕರೆಯುವವರೇ ಅಯೋಗ್ಯರು, ತಮ್ಮ ಸ್ಥಾನ ಉಳಿಸಿಕೊಳ್ಳಲು ಜನರಿಗೆ ದಂಗೆ ಏಳುವಂತೆ ಕರೆ ನೀಡಿದ್ದಾರೆ. ಮುಖ್ಯಮಂತ್ರಿಗಳ ಈ ಹೇಳಿಕೆಯು ಜನರನ್ನು ಕೆರಳಿಸುವಂತಿದೆ. ಈ ಹಿನ್ನೆಲೆಯಿಂದಾಗಿ ಅವರು ಜನರ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ