ಪ್ರಧಾನ ಮಂತ್ರಿ ಕೌಶಲ್ಯ ತರಬೇತಿ ಕೇಂದ್ರದಿಂದ ಕೊಡಗು ಸಂತ್ರಸ್ಥರಿಗೆ ಸಹಾಯ ಹಸ್ತ

ಚಿತ್ರದುರ್ಗ;

     ಇತ್ತೀಚೆಗೆ ಭಾರೀ ಮಳೆಯಿಂದಾಗಿ ಭೂ ಕುಸಿತಕ್ಕೊಳಗಾಗಿ ತಮ್ಮ ಮನೆ ಮಠಗಳನ್ನು ಕಳೆದುಕೊಂಡು ಬೀದಿಪಾಲಾಗಿರುವ ಕೊಡುಗು ಪ್ರದೇಶದ ಸಂತ್ರಸ್ಥರಿಗೆ ಪ್ರಧಾನಮಂತ್ರಿ ಕೌಶಲ್ಯ ತರಬೇತಿ ಕೇಂದ್ರ ಚಿತ್ರದುರ್ಗ ವತಿಯಿಂದ ಸಂತ್ರಸ್ಥರಿಗೆ ಸಹಾಯ ಹಸ್ತ ನೀಡಲಾಯಿತು.
ಚಿತ್ರದುರ್ಗದ ನಗರದ ಮಾದಾರ ಚನ್ನಯ್ಯ ಗುರುಪೀಠದಲ್ಲಿ ನಡೆಯುತ್ತಿರುವ ಪ್ರಧಾನಮಂತ್ರಿ ಕೌಶಲ್ಯ ತರಬೇತಿ ಕೇಂದ್ರದ ಸಿಬ್ಬಂದಿ ವರ್ಗದವರು ಮತ್ತು ತರಬೇತಿ ಪಡೆಯುತ್ತಿರುವ ವಿದ್ಯಾರ್ಥಿಗಳು ನಗರದ ಮೂಲೆ ಮೂಲೆಗಳಲ್ಲಿ ಸಂಚರಿಸಿ ಕೊಡಗಿಗಾಗಿ ದೇಣಿಗೆಯನ್ನು ಸಂಗ್ರಹಿಸಿದ್ದರು.

      ಪ್ರಧಾನ ಮಂತ್ರಿ ಕೌಶಲ್ಯ ಕೇಂದ್ರದ ಸಿಬ್ಬಂದಿವರ್ಗದವರು ಈ ರೀತಿ ಸಂಗ್ರಹವಾದ ಮೊತ್ತವನ್ನು ಇಂದು ಮುಖ್ಯಮಂತ್ರಿಗಳ ವಿಪತ್ತು ಪರಿಹಾರ ದೇಣಿಗೆಗೆ ಚಿತ್ರದುರ್ಗ ಅಪರ ಜಿಲ್ಲಾಧಿಕಾರಿಗಳ ಮೂಲಕ ಡಿಡಿಯನ್ನು ಹಸ್ತಾಂತರ ಮಾಡಿದರು.

      ಭಾರೀ ಮಳೆಯಿಂದಾಗಿ ಕೊಡಗಿನಲ್ಲಿ ವಾಸಿಸುತ್ತಿದ್ದವರು ತಮ್ಮ ಮನೆ ಮಠಗಳನ್ನು ಕಳೆದುಕೊಂಡು ಬೀದಿಗೆ ಬಂದಿರುವಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಈ ಸಂದರ್ಭದಲ್ಲಿ ಅವರಿಗೆ ಕೊಂಚಮಟ್ಟಿಗಾದರೂ ಸಹಾಯವಾಗಲಿ ಎಂದು ದೇಣಿಗೆ ಮೂಲಕ ಸಹಾಯ ಹಸ್ತ ನೀಡಲಾಯಿತು.

      ಇದೇ ಸಂದರ್ಭದಲ್ಲಿ ತರಬೇತಿ ಕೇಂದ್ರದ ವ್ಯವಸ್ಥಾಪಕ ಗಿರೀಶ್, ನವೀನ್, ಶಿವಪ್ರಸಾದ್, ಕಾರ್ತಿಕ್, ಜಗದೀಶ್ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ತರಬೇತಿಗೆ ನೋಂದಣಿ:     ಪ್ರಧಾನ ಮಂತ್ರಿ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಉಚಿತವಾಗಿ ತರಬೇತಿ ಪಡೆದು ಉದ್ಯೋಗಸ್ಥರಾಗಲು ನೊಂದಣಿ ಮಾಡಿಕೊಳ್ಳಬಹುದಾಗಿದ್ದು, ಇಚ್ಚಿಸುವವರು ತರಬೇತಿ ಕೇಂದ್ರಕ್ಕೆ ಆಧಾರ್‍ಕಾರ್ಡ್, 2-ಭಾವಚಿತ್ರ, ಅಂಕಪಟ್ಟಿ, ಬ್ಯಾಂಕ್ ಪಾಸ್‍ಪುಸ್ತಕದೊಂದಿಗೆ ಭೇಟಿ ನೀಡಿ ಮಾಹಿತಿ ಪಡೆಯಲು ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ: 7338480208 ಸಂಪರ್ಕಿಸಲು ಕೋರಲಾಗಿದೆ.

                        ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap