ಧಾರವಾಡ:

ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳು ನಡೆಸುವ ಜನತಾದರ್ಶನ ನಡೆಸುವ ಸಂದರ್ಭದಲ್ಲಿ ಅಧಿಕಾರಿಗಳು ಸ್ಥಳದಲ್ಲಿ ಹಾಜರಿದ್ದು ಸ್ಪಂದಿಸಬೇಕೆಂದು ವಿಧಾನಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು.
ಧಾರವಾಡದಲ್ಲಿ ಇಂದಿನಿಂದ ಆಯೋಜಿಸಲಾಗಿರುವ ಕೃಷಿಮೇಳದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದ ಅವರು, ಮಂಡ್ಯ ಜಿಲ್ಲೆಯ ಪಾಂಡುಪುರ ತಾಲ್ಲೂಕಿನ ಗ್ರಾಮವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ರೈತರನ್ನುದ್ದೇಶಿಸಿ, ಮಾತನಾಡುತ್ತಿದ್ದ ಅವರು ಈ ಅಧಿಕಾರಿಗಳು ಸ್ಪಂದಿಸದಿದ್ದರೆ, ಈ ರೀತಿಯ ಅನಾಹುತಗಳು ಸಂಭವಿಸುತ್ತವೆ.
ನನ್ನಂತವರು ಭಾಷಣ ಮಾಡುತ್ತಾರೆ, ಹೋಗುತ್ತಾರೆ. ಆದರೆ, ರೈತ ದೇಶದ ಬೆನ್ನೆಲಬು ಎಂದು ಹೇಳುತ್ತೇವೆ. ಆದರೆ, ಈ ರೈತರ ಬೆನ್ನೆಲುಬನ್ನೇ ತೆಗೆಯುತ್ತಿದ್ದಾರೆ ಎಂದು ಹೇಳಿದರು. ಇದರ ಕುರಿತು ಸರ್ಕಾರಕ್ಕೆ ಪತ್ರ ಬರೆಯುವುದಾಗಿ ಅವರು ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








