ಟಾಟಾ ಸುಮೋ ಹಾಗೂ ಸ್ವಿಫ್ಟ್ ಕಾರಿನ ನಡುವೆ ಅಪಘಾತ

ಬೆಂಗಳೂರು

      ಸರ್ಕಾರಿ ಟಾಟಾ ಸುಮೋ ಹಾಗೂ ಸ್ವಿಫ್ಟ್ ಕಾರಿನ ನಡುವೆ ಅಪಘಾತ ಸಂಭವಿಸಿ ಗುಡಿಬಂಡೆ ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಜಯಲಕ್ಷ್ಮಿ ಅವರು ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ರಾಷ್ಟ್ರೀಯ ಹೆದ್ದಾರಿ 7ರ ಗುಡಿಬಂಡೆಯ ತೀಲಕುಂಟಹಳ್ಳಿ ಕ್ರಾಸ್ ಬಳಿ ನಡೆದಿದೆ.

     ಗಾಯಗೊಂಡಿರುವ ಜಯಲಕ್ಷ್ಮಿ ಅವರಿಗೆ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತದಲ್ಲಿ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.

     ಸ್ವಿಫ್ಟ್ ಕಾರಿನ ಟೈರ್ ಸ್ಪೋಟಗೊಂಡು ಚಾಲಕನ ನಿಯಂತ್ರಣ ತಪ್ಪಿದ ಕಾರು, ಟಾಟಾ ಸುಮೋಗೆ ಡಿಕ್ಕಿ ಹೊಡೆದಿದೆ. ಅಪಘಾತದಿಂದಾಗಿ ಟಾಟಾ ಸುಮೋ ಪಲ್ಟಿಯಾಗಿದ್ದು, ಸ್ವಿಫ್ಟ್ ಕಾರು ನಜ್ಜುಗುಜ್ಜಾಗಿದೆ.ಗುಡಿಬಂಡೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

                       ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link