ಶಿವಮೊಗ್ಗ:
ಮಾಜಿ ಉಪಮುಖ್ಯಮಂತ್ರಿ, ಶಿವಮೊಗ್ಗ ಶಾಸಕ ಕೆ.ಎಸ್.ಈಶ್ವರಪ್ಪ ಅವರಿಗೆ ನಾಗಾಸಾಧುಗಳು ಆಶೀರ್ವಾದ ಮಾಡಿದರು. ಕರ್ನಾಟಕದ ವಿವಿಧ ರಾಜಕಾರಣಿಗಳ ನಿವಾಸಗಳಿಗೆ ನಾಗಾಸಾಧುಗಳು ಈಗಾಗಲೇ ಭೇಟಿ ನೀಡಿದ್ದಾರೆ.
2018ರ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿಯೂ ನಾಗಾಸಾಧುಗಳು ಶಿವಮೊಗ್ಗಕ್ಕೆ ಭೇಟಿ ನೀಡಿದ್ದರು. ಆಗ ಕೆ.ಎಸ್.ಈಶ್ವರಪ್ಪ ವಿರುದ್ಧ ಸ್ಪರ್ಧೆ ಮಾಡಿದ್ದ ಕಾಂಗ್ರೆಸ್ ಅಭ್ಯರ್ಥಿ ಕೆ.ಬಿ.ಪ್ರಸನ್ನ ಕುಮಾರ್ ಅವರಿಗೆ ಆಶೀರ್ವಾದ ಮಾಡಿದ್ದರು.
ಭಾನುವಾರ ಶಿವಮೊಗ್ಗದಲ್ಲಿರುವ ಕೆ.ಎಸ್.ಈಶ್ವರಪ್ಪ ಅವರ ‘ಜಯಲಕ್ಷ್ಮೀ’ ನಿವಾಸಕ್ಕೆ ಭೇಟಿ ನೀಡಿದ ನಾಗಾಸಾಧುಗಳು ಕೆ.ಎಸ್.ಈಶ್ವರಪ್ಪ ಮತ್ತು ಅವರ ಪುತ್ರ ಕಾಂತೇಶ್ ಅವರಿಗೆ ಆಶೀರ್ವಾದ ಮಾಡಿದರು. ತಮ್ಮ ಫೇಸ್ಬುಕ್ ಖಾತೆಯಲ್ಲಿ ಈಶ್ವರಪ್ಪ ಈ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.
ನಾಗಾಸಾಧುಗಳು ಮಾಜಿ ಸಚಿವ ಸಿ.ಟಿ.ರವಿ, ವರ್ತೂರು ಪ್ರಕಾಶ್, ಸಿದ್ದರಾಮಯ್ಯ ಅಭಿಮಾನಿ ಕಂಸಾಳೆ ರವಿ, ದಾವಣಗೆರೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಯಶವಂತರಾವ್ ಜಾಧವ್ ಅವರ ಮನೆಗೆ ಭೇಟಿ ನೀಡಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
