ಬೆಂಗಳೂರು
ನಗರದ ಹೊರವಲಯದ ನೆಲಮಂಗಲದ ಲಕ್ಕೇನಹಳ್ಳಿ ರಾಜ್ಯ ಹೆದ್ದಾರಿಯಲ್ಲಿ ಕೆಎಸ್ಆರ್ಟಿಸಿ ಬಸ್ 15 ಅಡಿಯ ಆಳಕ್ಕೆ ಉರುಳಿಬಿದ್ದು 30 ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
ಮಂಗಳೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಲಕ್ಕೇನಹಳ್ಳಿಯ ಬಳಿ ಭಾನುವಾರ ಮುಂಜಾನೆ ಸುಮಾರು 15 ಅಡಿ ಆಳಕ್ಕೆ ಬಿದ್ದು 4 ಕೆ.ವಿ. ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.
ಬಸ್ಸಿನಲ್ಲಿದ್ದ 30 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣ-ಪುಟ್ಟ ಗಾಯಗೊಂಡಿದ್ದು ಅವರನ್ನು ನೆಲಮಂಗಲದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದ್ದು ಎಲ್ಲರೂ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕುದೂರು ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








