ಹೊಸದಿಲ್ಲಿ:
ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಅಂಟೋನಿಯೋ ಗುಟೆರಸ್ ಅ. 1ರಂದು ಹೊಸದಿಲ್ಲಿಗೆ ಆಗಮಿಸುತ್ತಿದ್ದಾರೆ. ಬಳಿಕ ಅ. 2ರಂದು ಮಹಾತ್ಮ ಗಾಂಧೀಜಿಯವರ 150ನೇ ಜನ್ಮದಿನಾಚರಣೆ ವರ್ಷದ ಆರಂಭ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
2007ರಲ್ಲಿ ವಿಶ್ವಸಂಸ್ಥೆ ಗಾಂಧೀಜಿಯವರ ಜನ್ಮದಿನಾಚರಣೆಯನ್ನು ಅಂತಾರಾಷ್ಟ್ರೀಯ ಅಹಿಂಸಾ ದಿನವನ್ನಾಗಿ ಆಚರಿಸಲು ಕರೆಕೊಟ್ಟಿದೆ. ಭಾರತ ಪ್ರವಾಸದ ಎರಡನೇ ದಿನ ಗುಟೆರಸ್ ಅವರು ಇಂಡಿಯಾ ಹ್ಯಾಬಿಟ್ಯಾಟ್ ಸೆಂಟರ್‌ನಲ್ಲಿ ಜಾಗತಿಕ ಸವಾಲುಗಳು ಮತ್ತು ಜಾಗತಿಕ ಪರಿಹಾರೋಪಯಾಗಳು ಎಂಬ ವಿಚಾರವಾಗಿ ಮಾತನಾಡಲಿದ್ದಾರೆ. ಜತೆಗೆ ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಜತೆಗೂ ಮಾತುಕತೆ ನಡೆಸುವರು.
ಅ. 3ರಂದು ಕಾರ್ಯದರ್ಶಿಯವರು ರಾಷ್ಟ್ರಪತಿ ರಾಮನಾಥ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ಮತ್ತು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರನ್ನು ಭೇಟಿಯಾಗಲಿದ್ದಾರೆ. ಬಳಿಕ ಅಮೃತಸರಕ್ಕೆ ತೆರಳಿ ಗೋಲ್ಡನ್ ಟೆಂಪಲ್‌ಗೆ ಭೇಟಿ ನೀಡುವರು. ಅ. 4ರಂದು ವಾಪಸ್ ನ್ಯೂಯಾರ್ಕ್‌ಗೆ ತೆರಳಲಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
