ಬಾಪೂಜಿ ಪ್ರಥಮ ದರ್ಜೆ ಕಾಲೇಜು ವಿಶ್ವವಿದ್ಯಾಲಯ ಮಟ್ಟದ ಖೋ-ಖೋದಲ್ಲಿ ದ್ವಿತೀಯ ಸ್ಥಾನ

ಚಳ್ಳಕೆರೆ

     ದಾವಣಗೆರೆ ವಿಶ್ವವಿದ್ಯಾಲಯ ಮಟ್ಟದ ಕ್ರೀಡಾಕೂಟ ದಾವಣಗೆರೆಯಲ್ಲಿ ನಡೆದಿದ್ದು, ವಿಶ್ವವಿದ್ಯಾಲಯ ಮಟ್ಟದ ಅನೇಕ ಕಾಲೇಜುಗಳ ವಿವಿಧ ಕ್ರೀಡೆಗಳ ಕ್ರೀಡಾಪಟುಗಳು ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದು, ಖೋ-ಖೋ ಪುರುಷರ ಪಂದ್ಯಾದಲ್ಲಿ ಇಲ್ಲಿನ ಬಾಪೂಜಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ದ್ವಿತೀಯ ಸ್ಥಾನವನ್ನು ಗಳಿಸುವ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾರೆ.

      ಈ ಹಿನ್ನೆಲೆಯಲ್ಲಿ ಸೋಮವಾರ ಬಾಪೂಜಿ ಪ್ರಥಮದರ್ಜೆ ಕಾಲೇಜಿನ ಆವರಣದಲ್ಲಿ ಖೋ-ಖೋ ಪಂದ್ಯದಲ್ಲಿ ಜಯಗಳಿಸಿದ ಎಲ್ಲಾ ಕ್ರೀಡಾಪಟುಗಳನ್ನು ಕಾಲೇಜು ಪ್ರಾಂಶುಪಾಲರು ಹಾಗೂ ಆಡಳಿತ ಮಂಡಳಿ ಅಭಿನಂದಿಸಿತು.

       ಈ ಸಂದರ್ಭದಲ್ಲಿ ಪ್ರಾಂಶುಪಾಲ ಓ.ಬಾಬುಕುಮಾರ್ ಮಾತನಾಡಿ, ವಿಶ್ವವಿದ್ಯಾಲಯ ಮಟ್ಟದಲ್ಲಿ ಖೋ-ಖೋ ಪಂದ್ಯದಲ್ಲಿ ದ್ವಿತೀಯ ಸ್ಥಾನ ಪಡೆಯುವ ಮೂಲಕ ಕಾಲೇಜಿನ ಕೀರ್ತಿಯನ್ನು ನಮ್ಮ ಕ್ರೀಡಾಪಟುಗಳು ಮತ್ತಷ್ಟು ಎತ್ತರಕ್ಕೆ ತೆಗೆದುಕೊಂಡು ಹೋಗಿದ್ಧಾರೆ. ಯಾವುದೇ ಕ್ರೀಡೆ ಇರಲಿ ಅದರಲ್ಲಿ ಪಾಲ್ಗೊಳ್ಳುವ ಪ್ರತಿಯೊಬ್ಬ ಆಟಗಾರರು ಶ್ರದ್ದೆಯಿಂದ ಆಟವಾಡಬೇಕಾಗುತ್ತದೆ ಎಂದರು.

        ಈ ಸಂದರ್ಭದಲ್ಲಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಎಚ್.ಆರ್.ಮುಜೀಬುಲ್ಲಾ, ಹಿರಿಯ ಪ್ರಾಧ್ಯಾಪಕ ಡಿ.ಕರಿಯಣ್ಣ, ಚಂದ್ರಶೇಖರ್ ಮುಂತಾದವರು ಉಪಸ್ಥಿತರಿದ್ದರು.

                      ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link