ಹಾವೇರಿ :
ನಗರದ ಹುಕ್ಕೇರಿಮಠ ಶಾಲೆಯಲ್ಲಿ ಜರುಗಿದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಸವಣೂರ ತಾಲೂಕಿನ ಮಂತ್ರೋಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಕೋಲಾಟ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಈ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳು.ಶಾಲೆಯ ಪ್ರಧಾನ ಗುರುಗಳು,ಸಿಆರ್ಪಿಗಳು,ಶಾಲೆಯ ಎಸ್ಡಿಎಂಸಿ ಪದಾಧಿಕಾರಿಗಳು,ಶಿಕ್ಷಕ. ವಿದ್ಯಾರ್ಥಿ ವೃಂದದವರು ಹಾಗೂ ಊರಿನ ನಾಗರಿಕರು ಅಭಿನಂದಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








