ಬೆಂಗಳೂರು:
ಪರಿಶಿಷ್ಟ ಜಾತಿ ಮತ್ತು ಪಂಗಡದ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿ ಮಾಡುವ ಉದ್ದೇಶದಿಂದ ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಉಪ ಸಮಿತಿ ರಚಿಸಲಾಗಿದೆ. ಸಮಿತಿಯಲ್ಲಿ ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ, ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್. ಮಹೇಶ್ ಅವರ ಸಮಿತಿಯ ಸದಸ್ಯರಾಗಿದ್ದಾರೆ.
ಸರ್ಕಾರ ವಿವಿಧ ಇಲಾಖೆಗಳು, ನಿಗಮ ಮತ್ತು ಮಂಡಳಿಗಳು, ವಿಶ್ವವಿದ್ಯಾಲಯಗಳು, ಸಹಕಾರ ಸಂಘಗಳು ಹಾಗೂ ಅನುದಾನಿತ ಸಂಸ್ಥೆಗಳಲ್ಲಿ ಹಿಂಬಾಕಿ ಹುದ್ದೆಗಳನ್ನು ಭರ್ತಿ ಮಾಡುವ ಸಾಧಕ – ಬಾಧಕಗಳನ್ನು ಪರಿಶೀಲಿಸಲು ಈ ಸಮಿತಿ ರಚಿಸಲಾಗಿದೆ. ಕಳೆದ ಕೆಲವರ್ಷಗಳಿಂದ ಬ್ಯಾಕ್ ಲಾಗ್ ಹುದ್ದೆಗಳ ನೇಮಕಾತಿಯಲ್ಲಿ ಲೋಪದೋಷಗಳಾಗಿದ್ದು, ಇವುಗಳನ್ನು ಸರಿಪಡಿಸುವ ಉದ್ದೇಶದಿಂದ ಈ ಸಮಿತಿ ಸರ್ಕಾರಕ್ಕೆ ಸೂಕ್ತ ಶಿಫಾರಸ್ಸು ಮಾಡಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
